ಚಾಮರಾಜನಗರ: ಕೊರೊನಾ ಮಹಾಮಾರಿಗೆ ಜಿಲ್ಲೆಯಲ್ಲಿ ಮುಖ್ಯಶಿಕ್ಷಕರೊಬ್ಬರು ಇಂದು ಬಲಿಯಾಗಿರುವ ಘಟನೆ ನಡೆದಿದೆ.
ಕೊಳ್ಳೇಗಾಲದ ಗುರುಮಲ್ಲೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಉಮಾಪತಿ ಎಂಬವರು ಕೆಲದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅಸುನೀಗಿದ್ದಾರೆ.
ಈ ಹಿಂದೆ ಗುಂಡ್ಲುಪೇಟೆಯ ದೈಹಿಕ ಶಿಕ್ಷಕರೊಬ್ಬರು ಮಹಾಮಾರಿಗೆ ಬಲಿಯಾಗಿದ್ದರು. ಇಲ್ಲಿಯವರೆಗೆ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಶಿಕ್ಷಕರಿಗೆ ಕೊರೊನಾ ವಕ್ಕರಿಸಿದೆ.