ಚಾಮರಾಜನಗರ : ಬೆಳಗ್ಗೆಯಿಂದಲೇ ಜಿಲ್ಲಾದ್ಯಂತ ಮಳೆಯಾಗುತ್ತಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.
ಚಾಮರಾಜನಗರ ಜಿಲ್ಲಾಕೇಂದ್ರ, ಕೊಳ್ಳೇಗಾಲದಲ್ಲಿ ಸಾಧಾರಣ ಮಳೆಯಾಗಿರುವುದನ್ನು ಹೊರತುಪಡಿಸಿ ಯಳಂದೂರು, ಸಂತೇಮರಹಳ್ಳಿ, ಗುಂಡ್ಲುಪೇಟೆಯಲ್ಲಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಇನ್ನು ಬಂಡೀಪುರ ಅರಣ್ಯ ಪ್ರದೇಶವಂತೂ ಹೊಳೆಯಂತಾಗಿದೆ.
ಸಂಜೆ 4 ರಿಂದ ಯಾತ್ರಾಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರೀ ಮಳೆಯಾಗುತ್ತಿತ್ತು, ಮಳೆಯ ನಡುವೆಯೂ ಚಿನ್ನದ ರಥ ಸೇವೆ ನಡೆದಿದೆ ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತವಾಗಿತ್ತು ಎಂದು ತಿಳಿದುಬಂದಿದೆ.