ಚಾಮರಾಜನಗರ: ದೇಶದ್ರೋಹಿ ಹೇಳಿಕೆ ಕೂಗಿದ ಅಮೂಲ್ಯ ಹಾಗೂ ಆದ್ರಾಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟಿಸಿತು.
ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು, ಅಮೂಲ್ಯ ಮತ್ತು ಆದ್ರಾಳನ್ನು ನಾಯಿ, ಕತ್ತೆ, ಹಂದಿಗೆ ಹೋಲಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪಾಕ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಅರ್ಧ ತಾಸು ರಸ್ತೆ ತಡೆ ನಡೆಸಿದ ಕಾರ್ಯಕರ್ತರು ಇಬ್ಬರು ದೇಶದ್ರೋಹಿಗಳನ್ನು ಕೂಡಲೇ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.