ಕೊಳ್ಳೇಗಾಲ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಬಿದ್ದಿದ್ದು, ಲಕ್ಷಾಂತರ ರೂ. ಮೌಲ್ಯದ ಸಾಮಾಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿರುವ ಘಟನೆ ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ಜರುಗಿದೆ.
ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಬೆಂಕಿಯ ತೀವ್ರತೆಗೆ ಮನೆಯ ಮಾಲೀಕ ಸತೀಶ್ ಮುಖಕ್ಕೆ ಗಾಯವಾಗಿದೆ. ಅವಘಡದಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.