ETV Bharat / state

ಅದ್ದೂರಿಯಾಗಿ ಮದುವೆ ಮಾಡಿದರೂ ತೀರದ ವರದಕ್ಷಿಣೆ ದಾಹ : ಪತ್ನಿ ಕೊಂದು ನೇಣು ಹಾಕಿದ ಗಂಡ - ವರದಕ್ಷಿಣೆ ದಾಹ

ಪತಿ ಮನೆಯವರು ಕೊಲೆ ಮಾಡಿ ಬಳಿಕ ಮನೆಯ ಪಕ್ಕದಲ್ಲಿದ್ದ ಕೊಠಡಿಯಲ್ಲಿ ಮೃತ ದೇಹವನ್ನು ನೇತು ಹಾಕಿ ಪರಾರಿಯಾಗಿದ್ದಾರೆ ಎಂದು ಗ್ರಾಮಾಂತರ ಠಾಣೆಯಲ್ಲಿ ಮೃತಳ ಕುಟುಂಬಸ್ಥರು ದೂರು ನೀಡಿದ್ದಾರೆ..

husband-murder-his-wife-for-dowry
ಪತ್ನಿ ಕೊಂದು ನೇಣು ಹಾಕಿದ ಗಂಡ
author img

By

Published : Dec 14, 2021, 11:45 AM IST

ಚಾಮರಾಜನಗರ : ವರದಕ್ಷಿಣೆಗಾಗಿ ಪತ್ನಿಗೆ ಹಿಂಸೆ ನೀಡಿ ಕೊಲೆ ಮಾಡಿ ನೇಣು ಹಾಕಿದ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಕೊತ್ತಲವಾಡಿ ಗ್ರಾಮದ ದೇವಪ್ಪ ಎಂಬುವರ ಪುತ್ರಿ ದಿವ್ಯಾ (22) ಮೃತ ದುರ್ದೈವಿ. ಘಟನೆ ಬಳಿಕ ದಿವ್ಯಾ ಪತಿ ಜಯಶಂಕರ್, ಮಾವ ಸಿದ್ದಮಲ್ಲಪ್ಪ, ಅತ್ತೆ ಸುಂದ್ರಮ್ಮ, ಬಾವ ಚಂದ್ರಶೇಖರ್, ವಾರಗಿತ್ತಿ ರೇಖಾ ಪರಾರಿಯಾಗಿದ್ದಾರೆ.

ವರದಕ್ಷಿಣೆಗಾಗಿ ಹೆಂಡತಿ ಕೊಲೆ : ಕಳೆದ 9 ತಿಂಗಳ ಹಿಂದೆಯಷ್ಟೇ ಉಡಿಗಾಲ ಗ್ರಾಮದ ಜಯಶಂಕರ್ ಜೊತೆ ದಿವ್ಯಾ ವಿವಾಹವಾಗಿತ್ತು. ಮದುವೆಯ ಸಂದರ್ಭದಲ್ಲಿ ವರದಕ್ಷಿಣೆಯಾಗಿ 2 ಲಕ್ಷ ರೂ. ನಗದು, ಚಿನ್ನಾಭರಣ, ಬೆಳ್ಳಿಯನ್ನು ನೀಡಿ ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಆದರೆ, ಹೆಚ್ಚಿನ ಹಣಕ್ಕಾಗಿ ಗಂಡ ಪೀಡಿಸುತ್ತಿದ್ದ ಎನ್ನಲಾಗಿದೆ.

ಪತಿ ಮನೆಯವರು ಕೊಲೆ ಮಾಡಿ ಬಳಿಕ ಮನೆಯ ಪಕ್ಕದಲ್ಲಿದ್ದ ಕೊಠಡಿಯಲ್ಲಿ ಮೃತ ದೇಹವನ್ನು ನೇತು ಹಾಕಿ ಪರಾರಿಯಾಗಿದ್ದಾರೆ ಎಂದು ಗ್ರಾಮಾಂತರ ಠಾಣೆಯಲ್ಲಿ ಮೃತಳ ಕುಟುಂಬಸ್ಥರು ದೂರು ನೀಡಿದ್ದಾರೆ.

ಮೃತದೇಹವನ್ನು ಚಾ.ನಗರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.