ಚಾಮರಾಜನಗರ: ಬೆಂಗಳೂರಿನಿಂದ ಊಟಿಗೆ ತೆರಳುತ್ತಿದ್ದ ಹೈದರಾಬಾದ್ ಮೂಲದ ಪ್ರವಾಸಿಗರ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲಿಗೌಡನನಹಳ್ಳಿ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಹೈದರಾಬಾದ್ ಮೂಲದ ಜಯಲಕ್ಷ್ಮಿ(50) ಮೃತಪಟ್ಟಿದ್ದು, ಗಾಯಗೊಂಡ ವೆಂಕಯ್ಯ(54),ರಾಜೇಶ್, ಪದ್ಮಾವತಿ ಹಾಗೂ ಇಬ್ಬರು ಮಕ್ಕಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ಚಾಲಕನ ಅತಿ ವೇಗದ ಚಾಲನೆಯಿಂದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿರುವುದರಿಂದ ಈ ಅವಘಡ ಸಂಭವಿಸಿರುವುದಾಗಿ ಹೇಳಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿದ್ದು,ಕೇಸು ದಾಖಲಿಸಿಕೊಂಡಿದ್ದಾರೆ.
ಓದಿ : ಉಡುಪಿಯಲ್ಲಿ ಬಸ್ ಕಂಡಕ್ಟರ್ಗಳ ಬೀದಿ ಕಾಳಗ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್