ಚಾಮರಾಜನಗರ: ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಳ್ಳೇಗಾಲದ ಹಳೆ ಕುರುಬರ ಬೀದಿಯ ರಮೇಶ್ ಹಾಗೂ ಆದರ್ಶ ನಗರ ಬಡಾವಣೆ ನಿವಾಸಿ ರಾಜು ಬಂಧಿತ ಆರೋಪಿಗಳು. ಕೇರಳದಿಂದ ಅಕ್ರಮವಾಗಿ ಲಾಟರಿಗಳನ್ನು ತಂದು ಆನ್ಲೈನ್ ಮೂಲಕ ವ್ಯವಹಾರ ನಡೆಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾಟರಿ ಟಿಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ.