ETV Bharat / state

ಚಾಮರಾಜನಗರ ತಾಲೂಕಿನಲ್ಲಿ ಹೆಚ್ಚಾದ ಚಿರತೆಗಳ ದಾಳಿ... ಅರಣ್ಯ ಇಲಾಖೆ ವಿರುದ್ಧ ಜನರ ಕಿಡಿ - ಅರಣ್ಯ ಇಲಾಖೆ ವಿರುದ್ಧ ಜನರ ಕಿಡಿ

ನಂಜದೇವನಪುರ ಭಾಗದಲ್ಲಿ ಕಲ್ಲು ಗಣಿಗಾರಿಕೆಗಳ ಕ್ವಾರಿಗಳು ಚಿರತೆಗಳ ಅವಾಸಸ್ಥಾನವಾಗಿ ಮಾರ್ಪಟ್ಟಿವೆ.‌ ತೋಟದ ಮನೆಯಲ್ಲಿರುವವರು, ದನಗಾಹಿಗಳು ಜೀವ ಕೈಯಲ್ಲಿ ಹಿಡಿದು ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆತಂಕ ಹೊರಹಾಕಿದ್ದಾರೆ.‌ ಈ ಸಂಬಂಧ ಚಾಮರಾಜನಗರ ವಲಯ ಅರಣ್ಯಾಧಿಕಾರಿ ಅಭಿಲಾಶ್ ಪ್ರತಿಕ್ರಿಯಿಸಿ ಈಗಾಗಲೇ ನಾಲ್ಕು ಬೋನುಗಳನ್ನು ಚಿರತೆ ಸೆರೆಗಾಗಿ ಇಡಲಾಗಿದೆ. ಚಿರತೆಯ ಮೇಲೆ ನಿಗಾ ಇಡಲಾಗಿದೆ ಎಂದಿದ್ದಾರೆ.

Increased leopard attack in Chamarajanagar taluk
ಚಾಮರಾಜನಗರ ತಾಲೂಕಿನಲ್ಲಿ ಹೆಚ್ಚಾಯ್ತು ಚಿರತೆಗಳ ದಾಳಿ, ಅರಣ್ಯ ಇಲಾಖೆ ವಿರುದ್ಧ ಜನರ ಕಿಡಿ..!
author img

By

Published : Jun 14, 2020, 6:22 PM IST

Updated : Jun 14, 2020, 7:17 PM IST

ಚಾಮರಾಜನಗರ: ಒಂದು ಊರಿನ‌ ಬಳಿಕ ಮತ್ತೊಂದು ಊರಿನಲ್ಲಿ ಚಿರತೆ ದಾಳಿ ಮಾಡುತ್ತಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ಸಾಮಾನ್ಯವಾಗಿದ್ದು, ರೈತರು ಆತಂಕಗೊಂಡಿದ್ದಾರೆ.

ಮೂರು ದಿನದ ಅಂತರದಲ್ಲಿ ನಂಜದೇವನಪುರ, ಮರಿಯಾಲ, ಉಡಿಗಾಲ, ತಮ್ಮಡಹಳ್ಳಿ ಗ್ರಾಮಗಳಲ್ಲಿ ಚಿರತೆ ದಾಳಿಗೆ ಮೂರು ಹಸು ಒಂದು ಕುದುರೆ ಬಲಿಯಾಗಿದ್ದು, ಕೃಷಿ ಚಟುವಟಿಕೆಯಲ್ಲಿ ತೊಡಗಲು ರೈತರು ಹಿಂದುಮುಂದು ನೋಡುತ್ತಿದ್ದಾರೆ. ಗುರುವಾರ ತಮ್ಮಡಹಳ್ಳಿಯಲ್ಲಿ ಕುದುರೆ ಬಲಿ ಪಡೆದಿದ್ದ ಚಿರತೆ ಶುಕ್ರವಾರ ಮರಿಯಾಳದ ರಾಮಣ್ಣ ಎಂಬವರ ಹಸುವನ್ನು ಕೊಂದುಹಾಕಿತ್ತು. ಇಂದು ಉಡಿಗಾಲದ ಶ್ರೀಕಂಠಪ್ಪ ಎಂಬವರ ಎತ್ತನ್ನು ಚಿರತೆ ಸಾಯಿಸಿದೆ. ಕೆಲವು ದಿನಗಳ ಹಿಂದೆಯಷ್ಟೇ ವೀರನಪುರದಲ್ಲಿ ಇಬ್ಬರು ಮತ್ತು ಹಳೇಪುರದ ಓರ್ವ ವ್ಯಕ್ತಿಯ ಮೇಲೂ ಚಿರತೆ ದಾಳಿ ಮಾಡಿ ಭಯಭೀತಗೊಳಿಸಿತ್ತು‌.

ನಂಜದೇವನಪುರ, ವೀರನಪುರ, ಹಳೇಪುರ, ಉಡಿಗಾಲ,‌‌ ಕಲ್ಪುರ, ಕಡುವಿನಕಟ್ಟೆ ಹುಂಡಿ, ತಮ್ಮಡಹಳ್ಳಿ‌ ಭಾಗದಲ್ಲಿ ನಿತ್ಯ ಜಾನುವಾರುಗಳ ಮೇಲೆ ದಾಳಿಯಾಗುತ್ತಿದ್ದು, ಅರಣ್ಯ ಇಲಾಖೆ ಸ್ಪಂದಿಸುತ್ತಿಲ್ಲ. ಇಬ್ಬರು ಬೈಕಿನಲ್ಲಿ ಬಂದು ನೋಡಿಕೊಂಡು ಹೋಗುತ್ತಾರೆ. ಅದನ್ನು ಸೆರೆ ಹಿಡಿಯುವ ಪ್ರಯತ್ನ ಮಾಡುತ್ತಿಲ್ಲ ಎಂದು ನಂಜದೇವನಪುರದ‌‌ ರೈತ ಮುಖಂಡ ರಾಜಣ್ಣ ದೂರಿದ್ದಾರೆ.

ನಂಜದೇವನಪುರ ಭಾಗದಲ್ಲಿ ಕಲ್ಲು ಗಣಿಗಾರಿಕೆಗಳ ಕ್ವಾರಿಗಳು ಚಿರತೆಗಳ ಅವಾಸಸ್ಥಾನವಾಗಿ ಮಾರ್ಪಟ್ಟಿವೆ.‌ ತೋಟದ ಮನೆಯಲ್ಲಿರುವವರು, ದನಗಾಹಿಗಳು ಜೀವ ಕೈಯಲ್ಲಿ ಹಿಡಿದು ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆತಂಕ ಹೊರಹಾಕಿದ್ದಾರೆ.‌ ಈ ಸಂಬಂಧ ಚಾಮರಾಜನಗರ ವಲಯ ಅರಣ್ಯಾಧಿಕಾರಿ ಅಭಿಲಾಶ್ ಪ್ರತಿಕ್ರಿಯಿಸಿ ಈಗಾಗಲೇ ನಾಲ್ಕು ಬೋನುಗಳನ್ನು ಚಿರತೆ ಸೆರೆಗಾಗಿ ಇಡಲಾಗಿದೆ ಎಂದು ತಿಳಿಸಿದರು.
ಚಿರತೆ ಗಾಯಗೊಂಡಿದೆಯೇ ಇಲ್ಲವೇ ವಯಸ್ಸಾಗಿದೆಯೇ ಎಂಬ ಗೊಂದಲ‌ ಮುಂದುವರಿದೇ ಇದ್ದು, ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ‌‌ ಎಂಬ ಆರೋಪ ಕೇಳಿಬಂದಿದೆ. ನಿರಾಂತಕವಾಗಿದ್ದ ಮರಿಯಾಲದಲ್ಲೂ ಚಿರತೆ ಕಾಣಿಸಿಕೊಂಡು ಜನರ ನಿದ್ದೆಗೆಡಿಸಿದೆ.

ಚಾಮರಾಜನಗರ ತಾಲೂಕಿನಲ್ಲಿ ಹೆಚ್ಚಾದ ಚಿರತೆಗಳ ದಾಳಿ... ಅರಣ್ಯ ಇಲಾಖೆ ವಿರುದ್ಧ ಜನರ ಕಿಡಿ

Last Updated : Jun 14, 2020, 7:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.