ETV Bharat / state

ಕೊರೊನಾ ಪ್ರಕರಣ ಏರಿಕೆ ಹಿನ್ನೆಲೆ: ಕೇರಳ ಗಡಿಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹದ್ದಿನ ಕಣ್ಣು - Checking in Kerala Border

Checking in Kerala Border: ಕೇರಳ ಗಡಿ ಹಂಚಿಕೊಂಡಿರುವ ಚಾಮರಾಜನಗರದಲ್ಲಿ ಶಬರಿಮಲೆ ಯಾತ್ರೆ ಕೈಗೊಂಡು ವಾಪಾಸ್​ ಆಗುತ್ತಿರುವ ಅಯ್ಯಪ್ಪ ಭಕ್ತರ ಮೇಲೆ ಆರೋಗ್ಯ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಪ್ರತಿಯೊಬ್ಬರು ವಿವರಗಳನ್ನು ಪಡೆಯುತ್ತಿದೆ.

Checking Ayyappa devotees on Kerala border
ಕೇರಳ ಗಡಿಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹದ್ದಿನ ಕಣ್ಣು
author img

By ETV Bharat Karnataka Team

Published : Dec 22, 2023, 12:23 PM IST

Updated : Dec 22, 2023, 12:47 PM IST

ಕೇರಳ ಗಡಿಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹದ್ದಿನ ಕಣ್ಣು

ಚಾಮರಾಜನಗರ: ಕೇರಳದಲ್ಲಿ ರೂಪಾಂತರಿ ಕೊರೊನಾ ಆವರಿಸಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಹಂಚಿಕೊಂಡಿರುವ ಚಾಮರಾಜನಗರದಲ್ಲೂ ಕೂಡ ಕಟ್ಟೆಚ್ಚರ ವಹಿಸಲಾಗಿದ್ದು, ಕಳೆದ ಎರಡು ದಿನಗಳಿಂದ ತಪಾಸಣೆ ನಡೆಸಲಾಗುತ್ತಿದೆ. ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್​ ಪೋಸ್ಟ್​ನಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಕೇರಳದ ಭಾಗದಿಂದ ರಾಜ್ಯಕ್ಕೆ ಬರುವ ವಾಹನಗಳನ್ನು ತಡೆದು ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡಲಾಗುತ್ತಿದ್ದು, ಆರೋಗ್ಯದಲ್ಲಿ ವ್ಯತ್ಯಾಸವಾದರೆ ಯಾವುದೇ ಕಾರಣಕ್ಕೂ ಪ್ರಯಾಣ ಮಾಡಬೇಡಿ ಎಂದು ಸೂಚನೆ ಕೊಡುತ್ತಿದ್ದಾರೆ.

ಇನ್ನು, ಶಬರಿಮಲೆ ಯಾತ್ರೆ ಕೈಗೊಂಡು ವಾಪಾಸ್ ಆಗುವ ಅಯ್ಯಪ್ಪ ಭಕ್ತರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅವರ ವಿವರಗಳನ್ನು ಪಡೆಯಲಾಗುತ್ತಿದೆ. ಜ್ವರ, ಶೀತದಿಂದ ಬಳಲುವರಿಗೆ ಕೋವಿಡ್ ಟೆಸ್ಟ್‌ ಮಾಡಲು ಕೂಡ ಕ್ರಮ ವಹಿಸಿದ್ದು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐಸೋಲೇಟೆಡ್ ವಾರ್ಡ್ ಅನ್ನು ನಿರ್ಮಾಣ ಮಾಡಲಾಗಿದೆ‌. ಜೊತೆಗೆ, ಪ್ರಕರಣ ಹೆಚ್ಚಾದರೆ ಕಗ್ಗಳದ ಹುಂಡಿ ಆರೋಗ್ಯ ಕೇಂದ್ರದಲ್ಲಿಯೂ ಚಿಕಿತ್ಸೆ ನೀಡಲು ತಯಾರಿ ನಡೆಸಲಾಗಿದೆ.

ಇದನ್ನೂ ಓದಿ: ಬೆಳಗಾವಿ: ಸರ್ಕಾರಿ ಅಧಿಕಾರಿಗೆ ಕೋವಿಡ್ ಸೋಂಕು

ರಾಜ್ಯದಲ್ಲಿ 92 ಕೋವಿಡ್​ ಪಾಸಿಟಿವ್: ರಾಜ್ಯದಲ್ಲಿ 92 ಜನರಿಗೆ ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಇದೆ ಎಂದು ಗೊತ್ತಾಗಿದೆ. ಬೆಂಗಳೂರು ನಗರದಲ್ಲೇ 80 ಇದೆ. ಮೈಸೂರು 5, ಬಳ್ಳಾರಿ 3, ರಾಮನಗರ, ಮಂಡ್ಯದಲ್ಲಿ ತಲಾ 1 ಪಾಸಿಟಿವ್ ಇದೆ. 72 ಜನರಿಗೆ ಮನೆಯಲ್ಲೇ ಕ್ವಾರಂಟೈನ್​ಗೆ ಸೂಚಿಸಿದ್ದು 20 ಜನರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಜನ ಐಸಿಯುನಲ್ಲಿದ್ದಾರೆ. ಪ್ರತಿದಿನ 5 ಸಾವಿರ ಟೆಸ್ಟ್​ಗೆ ತಾಂತ್ರಿಕ ಸಲಹಾ ಸಮಿತಿಯವರು ಹೇಳಿದ್ದಾರೆ. ರ‍್ಯಾಪಿಡ್ 1500 ಮತ್ತು ಆರ್​ಟಿಪಿಸಿಆರ್​ 3500 ಟೆಸ್ಟ್ ಸೇರಿ 5 ಸಾವಿರ ಟೆಸ್ಟ್ ಶನಿವಾರದಿಂದ ಆರಂಭಿಸಲಾಗುತ್ತದೆ ಎಂದು ಸಿಎಂ ನಿನ್ನೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಕೇರಳದಲ್ಲಿ ಹೆಚ್ಚುತ್ತಲೇ ಇದೇ ಕೋವಿಡ್​ ಪ್ರಕರಣ: ಕೇರಳದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಸಾಗುತ್ತಿದೆ. ಕಳೆದ 24 ಗಂಟೆಯಲ್ಲಿ 265 ಹೊಸ ಕೋವಿಡ್​ ಪ್ರಕರಣಗಳು ದಾಖಲಾಗಿದ್ದು, ಒಂದು ಸಾವಿನ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಶುಕ್ರವಾರ ಬೆಳಗ್ಗೆ 8ಗಂಟೆಯ ಮಾಹಿತಿ ಅನುಸಾರ, ದೇಶದಲ್ಲಿ ಹೊಸದಾಗಿ 328 ಪ್ರಕರಣಗಳು ದಾಖಲಾಗಿದೆ. ಅದರಲ್ಲಿ 265 ಪ್ರಕರಣಗಳು ಕೇರಳದಲ್ಲಿ ವರದಿಯಾಗಿದೆ. ಸದ್ಯ ದೇಶದಲ್ಲಿ 2,606 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

Last Updated : Dec 22, 2023, 12:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.