ಚಾಮರಾಜನಗರ: ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಎರಡನೇ ದಿನವೂ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿದ ಕಡತಗಳನ್ನು ಪೊಲೀಸರು ಸೀಜ್ ಮಾಡುತ್ತಿದ್ದಾರೆ.
ಕೊಳ್ಳೇಗಾಲ ಡಿವೈಎಸ್ಪಿ ನಾಗರಾಜು ನೇತೃತ್ವದ ತಂಡ ಇಂದು ಜಿಲ್ಲಾಡಳಿತ ಭವನದಲ್ಲಿ ವಿಪತ್ತು ನಿರ್ವಹಣಾ ಕಚೇರಿ ಮತ್ತು ಜಿಪಂನ ಯೋಜನಾ ನಿರ್ದೇಶಕರ ಕಚೇರಿಗೆ ದಾಳಿಯಿಟ್ಟು ಜಿಲ್ಲಾಸ್ಪತ್ರೆಗೆ ಸಂಬಂಧಿಸಿದ ಸಂಪೂರ್ಣ ದಾಖಲಾತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಎಲ್ಲಾ ದಾಖಲೆಗಳನ್ನು ಸಿಡಿ ಬರ್ನ್ ಜತೆಗೆ ಝೆರಾಕ್ಸ್ ಪ್ರತಿ ತೆಗೆದುಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಪೊಲೀಸರಿಂದ ಪ್ರಮುಖ ಕಡತಗಳು ಜಪ್ತಿ.. ದಾಳಿ ವೇಳೆ ಕುಸಿದುಬಿದ್ದ ಚಾಮರಾಜನಗರ ಡಿಎಚ್ಒ
ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿರುವ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಹೆಚ್ಚುತ್ತಿರುವ ಮರಣಗಳ ಹಿಂದಿನ ನಿಖರ ಕಾರಣ ತಿಳಿಯಲು ಕೂಡ ಪರಿಣಿತರ ತಂಡ ಭೇಟಿ ನೀಡಲಿದೆ.