ಚಾಮರಾಜನಗರ: ಕಾರ್ಯಕರ್ತರಿಗೆ ಯಾವುದೇ ಗೊಂದಲ ಬೇಡ, ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರಿಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಚಾಮರಾಜನಗರ ಜೆಡಿಎಸ್ ಜಿಲ್ಲಾಧ್ಯಕ್ಷ ಕಾಮರಾಜು ಹೇಳಿದರು.
ನಗರದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರು ಮನೆ - ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕು, ಶೀಘ್ರವೇ ಪ್ರಚಾರದ ರೂಪುರೇಷೆ ಕುರಿತು ಮುಖಂಡರ ಸಭೆ ಕರೆಯಲಾಗುವುದು ಎಂದರು.
ಲೋಕಸಭೆಗೆ ಒಳಪಡುವ 8 ಕ್ಷೇತ್ರಗಳಲ್ಲಿ ಟಿ.ನರಸೀಪುರದಲ್ಲಿ ಜೆಡಿಎಸ್ ಶಾಸಕರಿದ್ದು, ಹನೂರಿನಲ್ಲೂ ಜೆಡಿಎಸ್ ಉತ್ತಮ ಮತಬ್ಯಾಂಕ್ ಒಳಗೊಂಡಿದೆ. ಇನ್ನು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಚಾರಕ್ಕೆ ಬರಬೇಕೆಂದು ಧ್ರುವನಾರಾಯಣ ಮನವಿ ಮಾಡಿಕೊಂಡಿದ್ದು, ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ. ಸಿಎಂ ಬಂದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿ ಸಮಾವೇಶ ನಡೆಸುತ್ತೇವೆ ಎಂದೂ ಅವರು ಇದೇ ವೇಳೆ ಮಾಹಿತಿ ನೀಡಿದರು.