ETV Bharat / state

ಪತ್ರಕರ್ತರ ಮೇಲಿನ ಹಲ್ಲೆಗೆ ಖಂಡನೆ: ತಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ - Chamarajanagar District News

ಬೆಂಗಳೂರಿನ ಡಿ.ಜೆ.ಹಳ್ಳಿ ಗಲಭೆಯ ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕೊಳ್ಳೇಗಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ ನಡೆಸಿದೆ.

journalists protest
ಪತ್ರಕರ್ತರ ಮೇಲಿನ ಹಲ್ಲೆಗೆ ಖಂಡನೆ
author img

By

Published : Aug 13, 2020, 7:48 PM IST

ಕೊಳ್ಳೇಗಾಲ: ಪತ್ರಕರ್ತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕೆ.ಕುನಾಲ್ ಅವರಿಗೆ ಸಲ್ಲಿಸಿದರು.

ಸಂಘದ ಕಾರ್ಯದರ್ಶಿ ರಾಜೇಶ್ ಮಾತನಾಡಿ, ಪ್ರತಿಯೊಬ್ಬ ಪರ್ತಕರ್ತರು ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ಕಾರ್ಯ ನಿರ್ವಹಿಸುತ್ತಾರೆ. ಎಂತಹ ವರದಿಯಾದರೂ ಘಟನಾ ಸ್ಥಳಕ್ಕೆ ಹೋಗಿ ಜನರಿಗೆ ಮಾಹಿತಿ ನೀಡುತ್ತಾರೆ. ಅಂತಹ ಮಹತ್ವ ಕೆಲಸ ಮಾಡುವ ವರ್ಗಕ್ಕೆ ಹಲ್ಲೆ ಮಾಡುವುದು. ಬೆದರಿಕೆ ಹಾಕುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸಿದ ಪತ್ರಕರ್ತರು

ಡಿ.ಜೆ ಹಳ್ಳಿ ಗಲಭೆಯಲ್ಲಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ತ್ವರಿತವಾಗಿ ತಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.