ETV Bharat / state

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ: ಆನೆ ದಾಳಿಯಿಂದ ಮೃತಪಟ್ಟಿರುವ ಶಂಕೆ - ಕಣಿಯನಪುರ ವ್ಯಕ್ತಿ ಶವವಾಗಿ ಪತ್ತೆ

ಕಳೆದ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಗುಂಡ್ಲುಪೇಟೆ ತಾಲೂಕಿನ ಕಾಡಂಚಿನ ಗ್ರಾಮದ ವ್ಯಕ್ತಿಯ ಶವ ಇಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆನೆ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

kaniyanapura missing man was found dead
ಶವ
author img

By

Published : Dec 20, 2020, 8:32 PM IST

ಚಾಮರಾಜನಗರ: ನಾಪತ್ತೆಯಾಗಿದ್ದ ಗಿರಿಜನ ವ್ಯಕ್ತಿಯೋರ್ವ 5 ದಿನಗಳ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಾಡಂಚಿನ ಗ್ರಾಮ ಕಣಿಯನಪುರ ಸಮೀಪ ನಡೆದಿದೆ.

ಕಣಿಯನಪುರ ಗ್ರಾಮದ ಬೊಮ್ಮ(45) ಮೃತ ದುರ್ದೈವಿ. ಮೃತರು ಹಲವು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಕಳೆದ 5 ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಆನೆ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಕುಂದಕೆರೆ ವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಪ್ರತಿಕ್ರಿಯಿಸಿ, ಇದುವರೆಗೆ ಕುಟುಂಬಸ್ಥರು ಆನೆ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿಲ್ಲ. ತನಿಖೆ ನಡೆಸಿದಾಗಲಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.