ಚಾಮರಾಜನಗರ: ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 24 ಕೋವಿಡ್ ರೋಗಿಗಳು ಸಾವನ್ನಪ್ಪಿರುವ ಘಟನೆಯನ್ನು ನ್ಯಾಯಾಂಗ ತನಿಖೆಗೆ ವಹಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖಾ ವಿಚಾರಣೆ ಆಯೋಗವನ್ನು ರಾಜ್ಯ ಸರಕಾರ ರಚಿಸಿದೆ.
ಚಾಮರಾಜನಗರ ಆಸ್ಪತ್ರೆಯ ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ. ಇದು ಸರ್ಕಾರದ ವೈಫಲ್ಯದಿಂದ ಆಗಿದೆ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು.
ಇದನ್ನೂ ಓದಿ: ಚಾಮರಾಜನಗರದಲ್ಲಿ ಭೀಕರ ದುರಂತ: 24 ಗಂಟೆ.. 24 ಸಾವು, ಆಕ್ಸಿಜನ್ ಸಿಗದೇ 12 ಮಂದಿ ಕೊನೆಯುಸಿರು
ಈ ಬಗ್ಗೆ ಗೃಹ ಮತ್ತು ಕಾನೂನು ಸಚಿವ ಬೊಮ್ಮಾಯಿ ಜತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅಂತಿಮವಾಗಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದಾರೆ.