ಚಾಮರಾಜನಗರ: ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿ ಮಗುವೊಂದು ದಾರುಣವಾಗಿ ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಂಗಸ್ವಾಮಿ ಮತ್ತು ಲಕ್ಷ್ಮಿ ದಂಪತಿಯ ಪುತ್ರ ಗಗನ್(11 ತಿಂಗಳು) ಮೃತ ಮಗು ಎಂದು ತಿಳಿದುಬಂದಿದೆ. ಮಗು ಗಗನ್ ಗೆ ಸ್ನಾನ ಮಾಡಿಸಿ ಮಲಗಿಸಿದ್ದ ವೇಳೆ ಅಲ್ಲೇ ಪಕ್ಕದಲ್ಲೇ ಇದ್ದ ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ್ದು, ಮಗುವಿಗೆ ವಿದ್ಯುತ್ ಶಾಕ್ ಹೊಡೆದಿದೆ.
ಇದನ್ನು ಕಂಡ ಮಗುವಿನ ಚಿಕ್ಕಮ್ಮ ಮಗುವನ್ನು ಬಿಡಿಸಲು ಪ್ರಯತ್ನಿಸಿದಾಗ ಅವರಿಗೂ ವಿದ್ಯುತ್ ಶಾಕ್ ಹೊಡೆದಿದೆ. ಇಬ್ಬರನ್ನು ತಕ್ಷಣ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದಾಗಲೇ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು: ಬೈಕಿಗೆ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ನರೀಪುರ ಸಮೀಪ ನಡೆದಿದೆ. ತಾಲೂಕಿನ ಉಮ್ಮತ್ತೂರು ಗ್ರಾಮದ ಮಹದೇವಸ್ವಾಮಿ ಮೃತವ್ಯಕ್ತಿ ಎಂದು ತಿಳಿದುಬಂದಿದೆ. ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಿಬ್ಬರು ವಿವಾಹ ಆಮಂತ್ರಣ ಪತ್ರಿಕೆ ಹಂಚಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಕಾರಿನೊಳಗೆ ಸುಟ್ಟು ಕರಕಲಾದ ಯುವಜೋಡಿ: ಘಟನೆಗೂ ಮುನ್ನ ಪೋಷಕರಿಗೆ ಸಂದೇಶ ರವಾನೆ