ETV Bharat / state

ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ: ಕೊಳ್ಳೇಗಾಲದಲ್ಲಿ ಆರೋಪಿ ಅರೆಸ್ಟ್​

ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರ ಅಪ್ರಾಪ್ತೆಯನ್ನು ಅಪಹರಿಸಿ ಕರೆದೊಯ್ದಿದ್ದ ಯುವಕ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗ್ತಿದೆ. ಸದ್ಯ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

author img

By

Published : Jan 25, 2021, 12:31 PM IST

kollegala
ದೇವರಾಜುಡು

ಕೊಳ್ಳೇಗಾಲ: ಅಪ್ರಾಪ್ತೆಯನ್ನು ಅಪಹರಿಸಿ ಬೈಕ್​ನಲ್ಲಿ ಹೊತ್ತೊಯ್ದು ಅತ್ಯಾಚಾರವೆಸಗಿದ ಆರೋಪಿಯನ್ನು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ‌ ನಿವಾಸಿ ದೇವರಾಜುಡು ಬಂಧಿತ ಆರೋಪಿ. ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿ‌ ಇರಿಸಲಾಗಿದೆ.

ಅಪ್ರಾಪ್ತೆಯ ತಾಯಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೆಲಸ ಮಾಡಿಕೊಂಡು ಆರೋಪಿಯಿದ್ದ ಬಡಾವಣೆಯಲ್ಲಿಯೇ ವಾಸಿಸುತ್ತಿದ್ದರು. ತಾಯಿಯನ್ನು ನೋಡಲು ಆಗಾಗ ಬಂದು ಹೋಗುತ್ತಿದ್ದ ಬಾಲಕಿಯನ್ನು ಪಕ್ಕದ ಮನೆಯ ಆರೋಪಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಎನ್ನಲಾಗ್ತಿದೆ. ಈ ನಡುವೆ ಗ್ರಾಮದಲ್ಲಿ ತಂದೆ ಜತೆ ವಾಸವಿದ್ದ ಬಾಲಕಿಯನ್ನು ಜ.14 ರಂದು ಬೈಕ್​ನಲ್ಲಿ ಬಂದು ಅಪಹರಿಸಿದ್ದ. ಈ ಸಂಬಂಧ ಅಪ್ರಾಪ್ತೆ ತಂದೆ ಮಗಳು ಕಾಣೆಯಾಗಿರುವ ಬಗ್ಗೆ ಜ.18 ರಂದು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ತನಿಖೆ ಕೈಗೊಂಡು ಆರೋಪಿ ಪತ್ತೆಗೆ ಮುಂದಾದ ಪೊಲೀಸರು ಆತನ ಮೊಬೈಲ್ ಲೋಕೇಷನ್ ಆಧರಿಸಿ ಬೆಂಗಳೂರಿನಲ್ಲಿದ್ದ ಆರೋಪಿ ಹಾಗೂ ಬಾಲಕಿಯನ್ನು ಪತ್ತೆಹಚ್ಚಿದ್ದಾರೆ.

ಇಬ್ಬರನ್ನೂ ಕರೆತಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ. ಈ ಸಂಬಂಧ ಪೋಕ್ಸೋ ಪ್ರಕರಣದಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.