ಕೊಳ್ಳೇಗಾಲ (ಚಾಮರಾಜನಗರ): ಕೆ.ಜೆ. ಹಳ್ಳಿ ಮತ್ತು ಡಿ.ಜೆ. ಹಳ್ಳಿಯ ಗಲಭೆಗಳನ್ನು ಭಜರಂಗದಳ ತೀವ್ರವಾಗಿ ವಿರೋಧಿಸುತ್ತದೆ. ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿ, ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಭಜರಂಗದಳದ ಮುಖಂಡ ಮಧುಸೂದನ್, ದೇಶದ ಸಂವಿಧಾನಕ್ಕೆ ಗೌರವ ಕೊಡದೆ, ಶಾಸಕರ ಮನೆ, ಪೊಲೀಸ್ ಠಾಣೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಲು ಈ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿ ಗಲಭೆಗೆ ಕಾರಣವಾದ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ಬ್ಯಾನ್ ಮಾಡಬೇಕು. ಈ ಪ್ರಕರಣದಲ್ಲಿ ಅಪಾರ ಆಸ್ತಿಪಾಸ್ತಿ ಹಾಗೂ ಶಾಂತಿಗೆ ಭಂಗ ಉಂಟು ಮಾಡಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.