ಕೊಳ್ಳೇಗಾಲ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ಕೊರೊನಾ ಧೃಡಪಟ್ಟಿದ್ದು, ಹೋಂ ಐಸೋಲೇಷನ್ಗೆ ಒಳಪಟ್ಟಿದ್ದಾರೆ. ಜ.16 ರಂದು ರಾತ್ರಿ ಜ್ವರ ಕಾಣಿಸಿಕೊಂಡ ಪರಿಣಾಮ ಶಾಸಕರು ನಿನ್ನೆ ಆರ್ಟಿಪಿಸಿ ಟೆಸ್ಟ್ ಮಾಡಿಸಿದ್ದರು. ಬಳಿಕ ತಪಾಸಣಾ ಫಲಿತಾಂಶದಲ್ಲಿ ಕೋವಿಡ್ ತಗುಲಿರುವುದು ದೃಢಪಟ್ಟಿದೆ.
ಈ ಹಿನ್ನೆಲೆ ಮೈಸೂರಿನಲ್ಲಿರುವ ತಮ್ಮ ಸ್ವಗೃಹದಲ್ಲಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಅದರಂತೆ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಆರ್.ಮುಧೋಳ್, ಡಾ.ರಾಜಶೇಖರ್ ಹಾಗೂ 13 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ.
ಇನ್ನು ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸರ್ಕಾರ ಈಗಾಗಲೇ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಸೇರಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿದೆ.
(ಇದನ್ನೂ ಓದಿ: 18 ವರ್ಷಗಳ ದಾಂಪತ್ಯ ಜೀವನಕ್ಕೆ ತೆರೆ ಎಳೆದ ಧನುಷ್!)