ಕೊಳ್ಳೇಗಾಲ: ಬಹುನೀರಿಕ್ಷಿತ ಕೊಳ್ಳೇಗಾಲ ನಗರಸಭೆ ಚುನಾವಣೆ ಇಂದು ನಡೆಯುತ್ತಿದ್ದು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಅಲಂಕರಿಸುವರಾರು ಎಂದು ಕಾದು ನೋಡಬೇಕಾಗಿದೆ.
ಶಾಸಕ ಎನ್.ಮಹೇಶ್ ಬೆಂಬಲಿಗರು ಸೇರಿ ಕಾಂಗ್ರೆಸ್, ಬಿಜೆಪಿ, ಬಿಎಸ್ಪಿ ಪಕ್ಷಗಳಿಂದ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೂಟಿ ನಡೆಯುತ್ತಿದ್ದು, ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಕಾರ್ಯ ಮುಗಿಸಿದ್ದಾರೆ.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಶಾಸಕ ಎನ್.ಮಹೇಶ್ ಬೆಂಬಲಿಗರಾದ ಗಂಗಮ್ಮ, ಕಾಂಗ್ರೆಸ್ನಿಂದ ಪುಷ್ಪಲತಾ, ಬಿಎಸ್ಪಿಯ ಜಯಮರಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಕವಿತಾ, ಕಾಂಗ್ರೆಸ್ನಿಂದ ಸುಶೀಲಾ ನಾಮಪತ್ರ ಸಲ್ಲಿಸಿದ್ದಾರೆ. ಕೊಳ್ಳೇಗಾಲ ನಗರಸಭೆ 100 ಮೀಟರ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆಯಲ್ಲಿ ಚುನಾವಣೆ ನಡೆಯುತ್ತಿದೆ.
ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಮತದಾನದಿಂದ ಅಧ್ಯಕ್ಷ-ಉಪಾಧ್ಯಕ್ಷರು ಯಾರು ಎಂಬುದು ತಿಳಿಯಲಿದೆ. ಚುನಾವಣಾಧಿಕಾರಿಯಾಗಿ ಉಪ ವಿಭಾಗಧಿಕಾರಿ ಗಿರೀಶ್ ದಿಲೀಪ್ ಬದೋಲೆ ಕಾರ್ಯನಿರ್ವಹಿಸುತ್ತಿದ್ದಾರೆ.