ಕೊಳ್ಳೇಗಾಲ: ಸಹಾಯಕ ಇನ್ಸ್ಪೆಕ್ಟರ್ ಓರ್ವರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಎರಡು ದಿನಗಳ ಕಾಲ ಕೊಳ್ಳೇಗಾಲ ಪೊಲೀಸ್ ಉಪಾಧೀಕ್ಷಕರ ಕಚೇರಿ ಸೀಲ್ಡೌನ್ ಮಾಡಲಾಗಿದೆ.
ಸೋಂಕಿತ ವ್ಯಕ್ತಿ ಪಟ್ಟಣದ ಸಿದಯ್ಯನಪುರ ಗ್ರಾಮದವರಾಗಿದ್ದು, ಕೊಳ್ಳೇಗಾಲ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಯಾವುದೇ ಗುಣ ಲಕ್ಣಣವಿಲ್ಲದಿದ್ದರೂ ಸ್ವಯಂ ಪ್ರೇರಿತವಾಗಿ ಕೊರೊನಾ ಟೆಸ್ಟ್ಗೆ ಒಳಪಟ್ಟಿದ್ದಾರೆ. ಬಳಿಕ ತಪಾಸಣೆಯ ವರದಿ ಪಾಸಿಟಿವ್ ಎಂದು ಬಂದಿದೆ.
ಈ ಹಿನ್ನೆಲೆ ಎರಡು ದಿನಗಳ ಕಾಲ ಕೊಳ್ಳೇಗಾಲ ಪೊಲೀಸ್ ಉಪಾಧೀಕ್ಷಕರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಡಿವೈಎಸ್ಪಿ ನವೀನ್ ಕುಮಾರ್ ತಿಳಿಸಿದ್ದು, ಸ್ವತಃ ಹೋಂ ಕ್ವಾರೆಂಟೈನ್ಗೆ ಒಳಗಾಗಿದ್ದಾರೆ ಎನ್ನಲಾಗಿದೆ.