ಕೊಳ್ಳೇಗಾಲ : ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಠಾಣೆಯನ್ನು ಮೂರು ದಿನ ಸೀಲ್‌ಡೌನ್ ಮಾಡಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ.
ಪಿಎಸ್ಐಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕೋವಿಡ್ ಕೇಂದ್ರದಲ್ಲಿ ಸ್ವತಃ ತಾವೇ ತಪಾಸಣೆ ಮಾಡಿಸಿದ್ದರು. ಇದೀಗ ವರದಿ ಪಾಸಿಟಿವ್ ಬಂದಿದೆ. ಪ್ರಾಥಮಿಕ ಸಂಪರ್ಕ ಹೊಂದಿದ ಸಿಬ್ಬಂದಿಯನ್ನು ಕೊರೊನಾ ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.