ಚಾಮರಾಜನಗರ: ಹಸು ಮೇಯಿಸಲು ತೆರಳಿದ್ದ ರೈತ ಹಾಗೂ ಕರುವೊಂದರ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹನೂರು ತಾಲೂಕಿನ ಕೆವಿಎಂ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೆವಿಎಂ ದೊಡ್ಡಿ ಗ್ರಾಮದ ಗೋವಿಂದಯ್ಯ (65) ಮೃತಪಟ್ಟವರು. ಹಸು ಮೇಯಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಚಿರತೆಯು ರೈತನ ಬಲಗಾಲನ್ನು ತಿಂದು ಪರಾರಿಯಾಗಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ರೈತ ಮುಖಂಡರು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ಮಹಿಳೆಯನ್ನು ಬಲಿ ಪಡೆದು ಆತಂಕ ಮೂಡಿಸಿದ್ದ ಚಿರತೆ ಸೆರೆ - ವಿಡಿಯೋ