ETV Bharat / state

ಪ್ರೀತಿಸಿ ಮದುವೆ: ಗರ್ಭಿಣಿ ಪತ್ನಿಗೆ ಮದ್ಯ ಕುಡಿಸಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ - Etv Bharat Kannada

ಗರ್ಭಿಣಿ ಪತ್ನಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ. ಚಾಮರಾಜನಗರ ಜಿಲ್ಲಾ ನ್ಯಾಯಾಲಯ ತೀರ್ಪು.

ಚಾಮರಾಜನಗರ ಜಿಲ್ಲಾ ನ್ಯಾಯಾಲಯ ತೀರ್ಪು
ಚಾಮರಾಜನಗರ ಜಿಲ್ಲಾ ನ್ಯಾಯಾಲಯ ತೀರ್ಪು
author img

By

Published : Sep 15, 2022, 8:22 AM IST

ಚಾಮರಾಜನಗರ: ಗರ್ಭಿಣಿ ಪತ್ನಿಗೆ ಜ್ಯೂಸ್‌ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಳ್ಳೇಗಾಲ ತಾಲೂಕಿನ ರಾಚಪ್ಪಾಜಿನಗರದ ಮುತ್ತುರಾಜ್ ಎಂಬಾತ ಶಿಕ್ಷೆಗೊಳಗಾಗಿರುವ ಅಪರಾಧಿ.

ಗರ್ಭಿಣಿ ಪತ್ನಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ: ಕಳೆದ 2013 ರಲ್ಲಿ ಗರ್ಭಿಣಿ ಪತ್ನಿ ಕೊಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಮುತ್ತುರಾಜ್​ಗೆ ಜೀವಾವಧಿ ಶಿಕ್ಷೆ ಮತ್ತು 2.10 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಏನಿದು ಕೊಲೆ ಕಹಾನಿ?: ಮುತ್ತುರಾಜ್ ಟ್ರಾಕ್ಟರ್ ಚಾಲಕನಾಗಿದ್ದು, ಅದೇ ಗ್ರಾಮದ ಜ್ಯೋತಿ ಎಂಬ ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆ ವಿವಾಹವಾಗಿದ್ದ. ಬಳಿಕ, ತಗಾದೆ ತೆಗೆದು ಪತ್ನಿ ಜೊತೆ ನಿತ್ಯ ರಂಪಾಟ ಮಾಡುತ್ತಿದ್ದ. ಈ ಮಧ್ಯೆ ಜ್ಯೋತಿ 3 ತಿಂಗಳ ಗರ್ಭಿಣಿಯಾಗಿದ್ದಳು. ಗರ್ಭಿಣಿಯಾಗಿರುವುದರಿಂದ ತವರು ಮನೆಗೆ ಹೋಗಿ ಬಾ ಎಂದು ಪುಸಲಾಯಿಸಿ ಬೈಕಿನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಜ್ಯೂಸ್ ನೊಟ್ಟಿಗೆ ಮದ್ಯ ಸೇರಿಸಿ ಕುಡಿಸಿ ಬಳಿಕ ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದ. ಗುರುತು ಪತ್ತೆಯಾಗದಿರಲೆಂದು ಎಡಕೆನ್ನೆಯನ್ನೇ ಸುಟ್ಟು ಪರಾರಿಯಾಗಿದ್ದ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುತ್ತುರಾಜ್​​ನನ್ನು ಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನಿರಂತರ ವಿಚಾರಣೆ ನಡೆದು ಮುತ್ತುರಾಜ್​​ನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಟಿ.ಹೆಚ್.ಲೋಲಾಕ್ಷಿ ವಾದ ಮಂಡಿಸಿದ್ದರು.

ಇದನ್ನೂ ಓದಿ: ವರದಕ್ಷಿಣಿಗಾಗಿ ಬೆಂಕಿ ಹಚ್ಜಿದ ಪತಿಯನ್ನೇ ತಬ್ಬಿಕೊಂಡ ಪತ್ನಿ: ಹೆಂಡತಿ ಸಾವು, ಚಿಂತಾಜನಕ ಸ್ಥಿತಿಯಲ್ಲಿ ಗಂಡ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.