ಚಾಮರಾಜನಗರ: ಪ್ರಸಿದ್ಧ ಯಾತ್ರಾ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಸಿಇಎನ್ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ
ಮಲೆಮಹದೇಶ್ವರ ಬೆಟ್ಟದ ಜನತಾ ಕಾಲೋನಿ ನಿವಾಸಿ ಚಂದ್ರು ಬಂಧಿತ ಆರೋಪಿ. ಈತ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ, ಸ್ಥಳೀಯರಿಗೆ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಶಿವರಾತ್ರಿ ಜಾತ್ರೆ ವೇಳೆ ಹೆಚ್ಚಿನ ಹಣಕ್ಕೆ ಮದ್ಯ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.
ವಿಷಯ ಅರಿತ ಪೊಲೀಸರು ಭಕ್ತರ ಸೋಗಿನಲ್ಲಿ ತೆರಳಿ ಆರೋಪಿಯನ್ನು ಬಂಧಿಸಿ 22 ಮದ್ಯದ ಬಾಕ್ಸ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಲೆಮಹದೇಶ್ವರ ಬೆಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.