ಚಾಮರಾಜನಗರ: ನಿಯಂತ್ರಣ ತಪ್ಪಿ ಲಾರಿಯೊಂದು ಚಲಿಸುತ್ತಿದ್ದ ಬೈಕ್ ಮೇಲೆ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಬಳಿ ನಡೆದಿದೆ.
ಬೈಕ್ ಸವಾರರಾದ ಶಿವಪುರದ ಶಿವಪ್ಪ, ಕಾಳಪ್ಪ ಹಾಗೂ ಲಾರಿ ಚಾಲಕ ಈಶ್ಚರಪ್ಪ ಮೃತಪಟ್ಟ ದುರ್ದೈವಿಗಳು. ಫ್ಲೈವುಡ್ ಶೀಟ್ಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದೆ. ಲಾರಿ ಬ್ರಿಡ್ಜ್ ಕೆಳಗೆ ಬಿದ್ದು ನಜ್ಜುಗುಜ್ಜಾಗಿದ್ದು ಚಾಲಕನ ದೇಹವನ್ನು ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಸ್ಥಳಕ್ಕೆ ಎಸ್ಪಿ, ಡಿವೈಎಸ್ಪಿ ಭೇಟಿ ನೀಡಿದ್ದು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.