ಕೊಳ್ಳೇಗಾಲ(ಚಾಮರಾಜನಗರ): ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿಯೊಂದು ಹಳ್ಳಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಮುಡಿಗುಂಡ ಗ್ರಾಮದ ಸೇತುವೆ ಬಳಿ ನಡೆದಿದೆ.
ತಮಿಳುನಾಡಿನ ಊಟಿಯ ನಿವಾಸಿ ಕಾರ್ತಿಕ್ (28) ಮೃತ ವ್ಯಕ್ತಿ. ಈತ ಬೆಂಗಳೂರಿನ ಯಶವಂತಪುರದಿಂದ ಲಾರಿಯಲ್ಲಿ ಆಲೂಗಡ್ಡೆ ತುಂಬಿಕೊಂಡು ಬರುತ್ತಿದ್ದ ವೇಳೆ ತಾಲೂಕಿನ ಮುಡಿಗುಂಡ ಸೇತುವೆ ಬಳಿ ಈ ಅವಘಡ ಸಂಭವಿಸಿದೆ. ಮೃತದೇಹವನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ನಾಗರಾಜು, ಸಿಪಿಐ ಶ್ರೀಕಾಂತ್ ಭೇಟಿ ನೀಡಿ ಪರಿಶೀಲಿಸಿದರು.