ಚಾಮರಾಜನಗರ: ದಕ್ಷಿಣ ಭಾರತದ ಪ್ರಮುಖ ಯಾತ್ರಸ್ಥಳಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಹುಂಡಿ ಎಣಿಕೆ ಇಂದು ನಡೆದಿದ್ದು, ಎರಡು ಕೋಟಿ ರೂ. ಹಣ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿದೇವಿ ಸಮಕ್ಷಮದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು 40 ದಿನಕ್ಕೆ 2,00,16,340 ಹಣ ಸಂಗ್ರಹಗೊಂಡಿದೆ. ಜೊತೆಗೆ, 50 ಗ್ರಾಂ ಚಿನ್ನ, 2,342 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಮಲೆಮಹದೇಶ್ವರನಿಗೆ ಸಮರ್ಪಿಸಿದ್ದಾರೆ.
ದಿನೆ ದಿನೇ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಮೂಲಕ ಪ್ರತಿ ತಿಂಗಳು ದೇವಸ್ಥಾನದ ಆದಾಯ ಹೆಚ್ಚಳವಾಗುತ್ತಿದೆ.
ಇದನ್ನೂ ಓದಿ:ಐತಿಹಾಸಿಕ ಬನವಾಸಿಯ ಮಧುಕೇಶ್ವರ ದೇವರ ನವರಥಕ್ಕೆ ಮುನ್ನುಡಿ