ETV Bharat / state

ಮುಗಿಲೆತ್ತರದ ಮಾದಪ್ಪ..108 ಅಡಿ ಮಲೆಮಹದೇಶ್ವರನ ಪ್ರತಿಮೆ 18ಕ್ಕೆ ಲೋಕಾರ್ಪಣೆ - ತ್ರಿಶೂಲ ಹಿಡಿದ ಮಹದೇಶ್ವರ ಸ್ವಾಮಿಯ ಪ್ರತಿಮೆ

ಇದೇ ತಿಂಗಳ 18ರಂದು ಚಾಮರಾಜನಗರದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 108 ಅಡಿಯ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಲಿದ್ದಾರೆ.

ಮಲೆ ಮಹದೇಶ್ವರ ಪ್ರತಿಮೆ
ಮಲೆ ಮಹದೇಶ್ವರ ಪ್ರತಿಮೆ
author img

By

Published : Mar 16, 2023, 5:31 PM IST

ಲೋಕಾರ್ಪಣೆಗೆ ಸಿದ್ಧವಾಯ್ತು ಮಲೆಮಹದೇಶ್ವರನ ಪ್ರತಿಮೆ

ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ. ಅಸಂಖ್ಯಾತ ಭಕ್ತರ ಪಾಲಿನ ದೈವ ‘ಮಾಯ್ಕರ ಮಾದಪ್ಪ’ನ ನೆಲದಲ್ಲಿ ಮುಗಿಲೆತ್ತರದಲ್ಲಿರುವ 108 ಅಡಿ ಪ್ರತಿಮೆ ಮೊದಲನೇ ಹಂತದ ಕಾಮಗಾರಿ‌ ಮುಗಿದಿದ್ದು ಮುಖ್ಯಮಂತ್ರಿ, ಶ್ರೀಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಬಸವರಾಜ ಬೊಮ್ಮಾಯಿ ಮಾರ್ಚ್​ 18ರಂದು ಲೋಕಾರ್ಪಣೆ ಮಾಡಲಿದ್ದಾರೆ. ಜೊತೆಗೆ ಪ್ರಾಧಿಕಾರದ ವತಿಯಿಂದ ನಿರ್ಮಾಣಗೊಂಡಿರುವ ಬೆಳ್ಳಿರಥವೂ ಲೋಕಾರ್ಪಣೆ ಆಗಲಿದೆ.

₹20 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಸದ್ಯ ಪ್ರತಿಮೆ ನಿರ್ಮಾಣ ಮಾತ್ರ ಪೂರ್ಣಗೊಂಡಿದೆ. ಮಹದೇಶ್ವರಸ್ವಾಮಿ ಜೀವನ ಚರಿತ್ರೆ ಸಾರುವ ಮ್ಯೂಸಿಯಂ, ಪ್ರತಿಮೆಯ ಸ್ಥಳದಲ್ಲಿ ಬಯಲು ರಂಗಮಂದಿರ, ಗಿಡಮೂಲಿಕಾ ವನಗಳ ಅಭಿವೃದ್ಧಿ ಸೇರಿದಂತೆ ಇತರ ಕಾಮಗಾರಿಗಳು ಇನ್ನಷ್ಟೇ ನಡೆಯಬೇಕಿವೆ.

ಗದಗದ ಸಿಎಸ್‌ಎಪಿ ಆರ್ಕಿಟೆಕ್ಟ್‌ ಸಂಸ್ಥೆಯು ಪ್ರತಿಮೆ ನಿರ್ಮಿಸಿದೆ. ಶ್ರೀಧರ್ ಎಂಬುವವರು ಪ್ರತಿಮೆಯ ಶಿಲ್ಪಿಯಾಗಿದ್ದು, ಮುರ್ಡೇಶ್ವರದ ಶಿವನ ಮೂರ್ತಿ, ಬಸವ ಕಲ್ಯಾಣದಲ್ಲಿ ಬೃಹತ್‌ ಬಸವಣ್ಣನ ಪ್ರತಿಮೆಗಳ ರೂವಾರಿ ಇವರು. ಹನೂರು ಭಾಗದಿಂದ ಬೆಟ್ಟಕ್ಕೆ ಬರುವವರು ಆನೆದಿಂಬ ತಲುಪುತ್ತಿದ್ದಂತೆಯೇ ಹುಲಿಮೇಲೆ ಕುಳಿತ ಮಾದಪ್ಪನ ಪ್ರತಿಮೆಯ ಸೊಬಗು ಕಾಣಬಹುದು. ತಮಿಳುನಾಡಿನಿಂದ ಬಂದರೆ ಗರಿಕೆಕಂಡಿ ಸಿಗುತ್ತಿದ್ದಂತೆ ಮಾದಪ್ಪನನ್ನು ಕಣ್ತುಂಬಿಕೊಳ್ಳಬಹುದು.

ಮಹದೇಶ್ವರ ಚರಿತ್ರೆ, ಪರಂಪರೆ ಸಾರುವ ಮ್ಯೂಸಿಯಂ : 108 ಅಡಿ ಎತ್ತರದ ‌ಪ್ರತಿಮೆಯು ಎರಡು ಸ್ತರದಲ್ಲಿ ನಿರ್ಮಾಣವಾಗಿದೆ. ಕಲ್ಲು ಬಂಡೆಯ ರಚನೆಯ ಮೇಲೆ ವ್ಯಾಘ್ರನ ಮೇಲೆ ಕುಳಿತ ತ್ರಿಶೂಲ ಹಿಡಿದ ಮಹದೇಶ್ವರ ಸ್ವಾಮಿಯ ಪ್ರತಿಮೆ ರೂಪಿಸಲಾಗಿದೆ. ಕಲ್ಲುಬಂಡೆ ಆಕೃತಿಯ ರಚನೆಯಲ್ಲಿ ಗುಹೆಯ ಮಾದರಿಯಲ್ಲಿ ಎರಡು ಮಹಡಿಗಳಿವೆ. ತಳಭಾಗದಲ್ಲಿ ಮಹದೇಶ್ವರ ಬೆಟ್ಟದ ಚಾರಿತ್ರಿಕ ಹಿನ್ನಲೆ ಸಾರುವ ಕಲಾಕೃತಿ ಚಿತ್ರಗಳ ರಚನೆ, ಭಕ್ತರ ವಿಶ್ರಾಂತಿ ಸ್ಥಳಾವಕಾಶ ಸೇರಿದಂತೆ ಭಕ್ತರು, ಪ್ರವಾಸಿಗರಿಗೆ ಮಹದೇಶ್ವರ ಚರಿತ್ರೆ, ಪರಂಪರೆ ಸಾರುವ ಮ್ಯೂಸಿಯಂ ನಿರ್ಮಾಣವಾಗಲಿದೆ.

ತರಾತುರಿ ಕಾರ್ಯಕ್ರಮ ಆರೋಪ : ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತರಾತುರಿ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಕ್ತರು ಆಕ್ರೋಶ ಹೊರಹಾಕುತ್ತಿದ್ದಾರೆ. ಒಂದು ಹಂತದ ಕಾಮಗಾರಿಯಷ್ಟೇ ಮುಗಿದಿದೆ. ಅಷ್ಟರಲ್ಲೇ ಉದ್ಘಾಟನಾ ಭಾಗ್ಯ ಕಾಣುತ್ತಿದೆ. ಪ್ರಸ್ತುತ ಹುಲಿಯ ಮೇಲೆ ಕುಳಿತ 108 ಅಡಿ ಎತ್ತರದ ಸ್ವಾಮಿಯ ಮೂರ್ತಿ ಮಾತ್ರ ಪೂರ್ಣಗೊಂಡಿದೆ. ಪ್ರತಿಮೆ ಕೆಳಗೆ ಪೀಠ ನಿರ್ಮಾಣ ಮಾಡಲಾಗಿದ್ದು, ಗುಹೆಯಂತಿರುವ ಈ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಹದೇಶ್ವರರ ಜೀವನ ಚರಿತ್ರೆ ಸಾರುವ ಮ್ಯೂಸಿಯಂ ಕಾಮಗಾರಿ ಮುಗಿದಿಲ್ಲ.

ವಾಹನ ಪಾರ್ಕಿಂಗ್​, ಮೂಲಸೌಕರ್ಯಗಳಿಲ್ಲ : ಇಲ್ಲಿಗೆ ಭಕ್ತರು ಬರಲು ಸಮರ್ಪಕವಾದ ರಸ್ತೆ ನಿರ್ಮಾಣವಾಗಿಲ್ಲ. ಕುಡಿಯುವ ನೀರು, ಶೌಚಗೃಹ, ವಾಹನ ಪಾರ್ಕಿಂಗ್ ಮತ್ತು ಮೂಲಸೌಕರ್ಯಗಳಿಲ್ಲ. ಈ ರೀತಿ ಇಲ್ಲಗಳ ನಡುವೆ ಕಣ್ಣಿಗೆ ದೊಡ್ಡದಾಗಿ ಕಾಣುವಂತೆ ಸಿದ್ಧಗೊಂಡಿರುವ 108 ಅಡಿ ಪ್ರತಿಮೆ ಮಾತ್ರ ಉದ್ಘಾಟಿಸುತ್ತಿರುವುದು ಏತಕ್ಕೆ? ಎಂದು ಭಕ್ತರು ಕಿಡಿಕಾರಿದ್ದಾರೆ. ಒಟ್ಟಿನಲ್ಲಿ ಚುನಾವಣಾ ಕಾಲದಲ್ಲಿ ಧಾರ್ಮಿಕ ಕ್ಷೇತ್ರವೂ ಬಳಕೆಯಾಗುತ್ತಿರುವುದು ವಿಪರ್ಯಾಸವಾಗಿದೆ.

ಇದನ್ನೂ ಓದಿ : ಮಳಲಿ ಮಸೀದಿ ವಿವಾದ: ಮಂದಿರ ನಿರ್ಮಾಣಕ್ಕೆ ಗಣಯಾಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.