ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ ₹1.54 ಕೋಟಿ ರೂ. ಸಂಗ್ರಹವಾಗಿದೆ.
ಒಂದು ತಿಂಗಳಿಗೆ ಭಕ್ತರಿಂದ 1,54,64,147 ರೂ. ಸಂಗ್ರಹವಾಗಿದ್ದು, ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೇ ಹರಿಸಿದ್ದಾರೆ. ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಭಕ್ತರಿಗೆ ಅವಕಾಶ ನೀಡಿದ್ದರೇ ಎರಡು ಕೋಟಿಗೂ ಹೆಚ್ಚು ಹಣ ಸಂಗ್ರಹವಾಗುತ್ತಿತ್ತು. ಆದರೆ, ನಾಲ್ಕು ದಿನ ಭಕ್ತರಿಗೆ ನಿರ್ಬಂಧ ವಿಧಿಸಿದ್ದರಿಂದ ಹಿಂದಿನ ಶಿವರಾತ್ರಿಗೆ ಹೋಲಿಸಿದಾಗ ಆದಾಯದಲ್ಲಿ ಇಳಿಕೆಯಾಗಿದೆ.
ಇದನ್ನೂ ಓದಿ: ಎರಡು ಸಮಾನಾಂತರ ರನ್ ವೇ ಹೊಂದಿರುವ ದಕ್ಷಿಣ ಭಾರತದ ಮೊದಲ ವಿಮಾನ ನಿಲ್ದಾಣ ಕೆಐಎ
ಈ ಬಾರಿ 60 ಗ್ರಾಂ ಚಿನ್ನ ಹಾಗೂ 2.00 ಕೆಜಿ ಬೆಳ್ಳಿ ಕಾಣಿಕೆ ರೂಪದಲ್ಲಿ ಭಕ್ತರು ಮಾದಪ್ಪನಿಗೆ ಅರ್ಪಿಸಿದ್ದಾರೆ. ಇತ್ತೀಚೆಗೆ ಭಕ್ತರ ಸಂಖ್ಯೆಯಲ್ಲಿ ಏರುಗತಿ ಕಂಡಿದ್ದು ವಿಶೇಷ ಸೇವೆಗಳಿಂದ ದಿನವೊಂದಕ್ಕೆ ಮಹದೇಶ್ವರ ದೇಗುಲಕ್ಕೆ ಲಕ್ಷಾಂತರ ರೂ. ಆದಾಯ ಬರುತ್ತಿದೆ.