ಚಾಮರಾಜನಗರ: ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ಹುಂಡಿಗಳ ಎಣಿಕೆ ನಡೆದಿದ್ದು ಎರಡೂವರೆ ಕೋಟಿ ರೂಪಾಯಿ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್‌ನಲ್ಲಿ ಹುಂಡಿಯ ಹಣ ಎಣಿಕೆ ಕಾರ್ಯ ನಡೆಸಲಾಯಿತು.
ಈ ಬಾರಿಯ ಮಹಾನವಮಿ ಆಯುಧ ಪೂಜೆ, ವಿಜಯದಶಮಿ, ದೀಪಾವಳಿ ಜಾತ್ರಾ ಮಹೋತ್ಸವ ಸೇರಿದಂತೆ ಸರ್ಕಾರಿ ರಜಾ ದಿನಗಳಲ್ಲಿ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದ ಪರಿಣಾಮವಾಗಿ ಕಳೆದ 36 ದಿನಗಳ ಅವಧಿಯಲ್ಲಿ 2,50,85,794 ರೂಪಾಯಿ ಹಣ ಸಂಗ್ರಹವಾಗಿದೆ ಮತ್ತು 122 ಗ್ರಾಂ ಚಿನ್ನ ಹಾಗೂ 2.710 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ.
ಇದನ್ನೂ ಓದಿ:ಹಲಸು ಬೆಳೆಸಿ ಹಣ್ಣು ತಿನ್ನಲು ಹೆಚ್ಚು ಕಾಯಬೇಕಿಲ್ಲ; ಒಂದೆರಡು ವರ್ಷಕ್ಕೆಲ್ಲ ಫಲಕೊಡಲಿವೆ ಈ ಕಸಿಗಿಡಗಳು