ಚಾಮರಾಜನಗರ: ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು 2.59 ಕೋಟಿ ರೂ ಸಂಗ್ರಹವಾಗಿದೆ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್‌ನಲ್ಲಿ ಎಣಿಕೆ ಕಾರ್ಯ ನಡೆಯಿತು. 34 ದಿನಗಳ ಅವಧಿಯಲ್ಲಿ 2 ಕೋಟಿ 59 ಲಕ್ಷದ 31 ಸಾವಿರದ 472 ರೂ. ಸಂಗ್ರಹವಾಗಿದೆ. 80 ಗ್ರಾಂ ಚಿನ್ನ ಹಾಗೂ 3.900 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ.
ಇದನ್ನೂ ಓದಿ: ಮಾದಪ್ಪನ ದೀಪಾವಳಿ ತೇರು ಸಂಪನ್ನ: ಡ್ರೋನ್ನಲ್ಲಿ ವೈಭವದ ದೃಶ್ಯ ಸೆರೆ