ಚಾಮರಾಜನಗರ: ಕಾಡಾನೆಯೊಂದು ದಾಳಿ ಮಾಡಿ ಮಾನಸಿಕ ಅಸ್ವಸ್ಥನೊಬ್ಬನನ್ನು ಬಲಿ ಪಡೆದಿರುವ ಘಟನೆ ಚಾಮರಾಜನಗರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-209ರ ದೊಡ್ಡ ಮೂಡಲಹಳ್ಳಿ ಬಳಿ ನಡೆದಿದೆ.
ಕಳೆದ ಒಂದು ತಿಂಗಳಿನಿಂದಲೂ ಈ ರಾಷ್ಟ್ರೀಯ ಹೆದ್ದಾರಿಯಲ್ಲೇ ಮಾನಸಿಕ ಅಸ್ವಸ್ಥ ತಿರುಗಾಡುತ್ತಿದ್ದ ಎಂದು ತಿಳಿದುಬಂದಿದ್ದು, ರಸ್ತೆ ಬದಿ ನಿಂತಿದ್ದ ಮಾನಸಿಕ ಅಸ್ವಸ್ಥನ ಮೇಲೆ ಕಾಡಾನೆ ದಾಳಿ ಮಾಡಿ ಬಲಿ ಪಡೆದಿದೆ.
ಮಾನಸಿಕ ಅಸ್ವಸ್ಥನ ಗುರುತು ಪತ್ತೆ ಹಚ್ಚಲು ಚಾಮರಾಜನಗರದ ಪೂರ್ವ ಠಾಣೆ ಪೊಲೀಸರು ಮುಂದಾಗಿದ್ದಾರೆ. ಬಿಆರ್ಟಿ ಹುಲಿ ಯೋಜನೆ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.