ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿ ಆನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಸಮೀಪದ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ದೊಡ್ಡಮೂಡಹಳ್ಳಿ ಗ್ರಾಮದ ಚಾಟಿನಿಂಗಯ್ಯ (52) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದು ಹೋಗುತ್ತಿರುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ದೋಣಿಗಲ್ನಲ್ಲಿ ರಸ್ತೆ ಕುಸಿತ: ಗುಂಡ್ಯ ಚೆಕ್ ಪೋಸ್ಟ್ನಲ್ಲಿ ಘನ ವಾಹನ ಚಾಲಕರ ಪರದಾಟ