ಚಾಮರಾಜನಗರ: ಕೃಷಿ ಹೊಂಡದಲ್ಲಿ ನಾಯಿ ತೊಳೆಯುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿವೋರ್ವ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿಯಲ್ಲಿ ನಡೆದಿದೆ.
ಕಲ್ಲಹಳ್ಳಿ ಗ್ರಾಮದ ನಾಗಭೂಷಣ (55) ಮೃತ ದುರ್ದೈವಿ. ಕಬ್ಬಹಳ್ಳಿ ಕಾವೇರಿ ಗ್ರಾಮೀಣ ಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಜಮೀನಿನ ಕೃಷಿ ಹೊಂಡದಲ್ಲಿ ನಾಯಿಯನ್ನು ತೊಳೆಯುತ್ತಿದ್ದ ವೇಳೆ ಕಾಲುಜಾರಿ ಬಿದ್ದು ಈಜು ಬಾರದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ತೆರಕಣಾಂಬಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿಲ್ಲ.