ETV Bharat / state

ಕೊಳ್ಳೇಗಾಲ: ಪತ್ನಿ-ಮಗ ಪ್ರವಾಸಕ್ಕೆ ತೆರಳಿದ್ದ ವೇಳೆ ವ್ಯಕ್ತಿಯ ತಲೆ ಜಜ್ಜಿ ಕೊಲೆಗೈದ ಕಿರಾತಕರು - ವ್ಯಕ್ತಿಯೊಬ್ಬನ ತಲೆ ಜಜ್ಜಿ ಭೀಕರವಾಗಿ ಕೊಲೆ

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಮಹದೇವಸ್ವಾಮಿ (45) ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಕೊಳ್ಳೇಗಾಲ ಗ್ರಾಮಾಂತರ ಠಾಣೆ
ಕೊಳ್ಳೇಗಾಲ ಗ್ರಾಮಾಂತರ ಠಾಣೆ
author img

By

Published : Dec 22, 2022, 3:30 PM IST

Updated : Dec 22, 2022, 3:39 PM IST

ಚಾಮರಾಜನಗರ : ವ್ಯಕ್ತಿಯೊಬ್ಬನ ತಲೆ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಜಿ.ವಿ ಗೌಡ ನಗರದ ಮಹದೇವಸ್ವಾಮಿ (45) ಕೊಲೆಗೀಡಾಗಿರುವ ವ್ಯಕ್ತಿ.

ಈತನಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಪತ್ನಿ ಹಾಗೂ ಮಗ ಪ್ರವಾಸಕ್ಕೆ ಎರಡು ದಿನಗಳು ತೆರಳಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೇ ಮಲಗಿದ್ದಾಗ ಮಹದೇವಸ್ವಾಮಿ ತಲೆಗೆ ಹೊಡೆದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬಾಗಿಲು ತೆರೆದಿದ್ದರೂ ಈತನನ್ನು ಕರೆದಾಗ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆ ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವಿಚಾರ ತಿಳಿದ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

ಶವವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಓದಿ: ದಾವಣಗೆರೆ: ಪ್ರೀತಿ ನಿರಾಕರಿಸಿದ ಯುವತಿಯನ್ನ ಹಾಡಹಗಲೇ ಕೊಂದ ಪಾಗಲ್​ಪ್ರೇಮಿ

Last Updated : Dec 22, 2022, 3:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.