ಚಾಮರಾಜನಗರ: ಒಂದೇ ಮನೆಯ ಮೂವರಿಗೆ ವ್ಯಕ್ತಿವೋರ್ವ ಚಾಕು ಇರಿದು ಪರಾರಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಪುರ ಗ್ರಾಮದಲ್ಲಿ ಸಂಜೆ ನಡೆದಿದೆ.
ಗ್ರಾಮದ ಶಿವಣ್ಣ(28), ಮಹಾದೇವಯ್ಯ(55) ಹಾಗೂ ಕುಮಾರ್(30) ಎಂಬುವರಿಗೆ ಅದೇ ಗ್ರಾಮದ ಪ್ರಜ್ವಲ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಮೂವರ ಹೊಟ್ಟೆ, ಎದೆ ಭಾಗಕ್ಕೆ ತೀವ್ರವಾಗಿ ಗಾಯಗೊಂಡಿದ್ದು, ಬೇಗೂರಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಹಳೇ ದ್ವೇಷದಿಂದ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗ್ರಾಮಕ್ಕೆ ಪೊಲೀಸರು ತೆರಳಿದ್ದಾರೆ.