ಕೊಳ್ಳೇಗಾಲ: ಇಲ್ಲಿನ ಗುಂಡೇಗಾಲ ಗ್ರಾಮದ ವಿವಾಹಿತ ಮಹಿಳೆಯೋರ್ವಳು ಮನೆಯಲ್ಲಿ ಯಾರು ಇಲ್ಲದ ವೇಳೆ ಬಟ್ಟೆ, ಚಿನ್ನಾಭರಣ ತೆಗೆದುಕೊಂಡು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆಕೆಯ ಗಂಡ ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾನೆ.
ಓದಿ: ಆನೆಗೆ ಬೆಂಕಿ ಹಚ್ಚಿದ ದುರುಳರ ಬಂಧಿಸಿದ ಅರಣ್ಯ ಇಲಾಖೆ!
ತಾಲ್ಲೂಕಿನ ಗುಂಡೇಗಾಲ ಗ್ರಾಮದ ಶಿವಕುಮಾರ್ ಎಂಬುವನ ಹೆಂಡತಿ ಸೌಂದರ್ಯ(23) ಕಾಣೆಯಾಗಿರುವ ಮಹಿಳೆ. ಈಕೆ ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪದ ಅಂತರಗಂಗೆ ಗ್ರಾಮದವಳು. ಸೌಂದರ್ಯ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಶಿವಕುಮಾರ್ ಸಹ ಬೆಂಗಳೂರಿನ ಮಾಲ್ನಲ್ಲಿ ಪ್ಯಾಕರ್ ಆಗಿ ಕಾರ್ಯನಿರ್ವಹಿಸುತ್ತಿನು. ಇಬ್ಬರ ನಡುವೆ ಪರಿಚಯವಾಗಿ ತದನಂತರ ಪ್ರೇಮ ಬೆಳೆದಿದೆ. ಆನಂತರ ಕೊಳ್ಳೇಗಾಲಕ್ಕೆ ಬಂದು ಮದುವೆಯಾಗಿ ಹುಟ್ಟೂರಾದ ಗುಂಡೇಗಾಲದಲ್ಲಿ ಕಳೆದ ಒಂದು ವರ್ಷದಿಂದ ವೈವಾಹಿಕ ಜೀವನ ನಡೆಸುತ್ತಿದ್ದರು.
ಆದರೆ, ಜ.19 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಸೌಂದರ್ಯ ತನ್ನ ಬಟ್ಟೆ, ಚಿನ್ನಾಭರಣ ತೆಗೆದುಕೊಂಡು ಕಾಣಿಯಾಗಿದ್ದಾಳೆ ಎಂದು ಆಕೆಯ ಗಂಡ ಶಿವಕುಮಾರ್ ಪೊಲೀಸರಿಗೆ ದೂರು ನೀಡಿದ್ದಾನೆ.ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಹಿಳೆ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.