ಚಾಮರಾಜನಗರ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಇಂದು ಚಾಮರಾಜನಗರ ಪ್ರವಾಸ ಕೈಗೊಂಡಿದ್ದು ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.
ಸಭೆಯು ಮೊದಲನೇ ಮಹಡಿಯಲ್ಲಿ ನಡೆಯುತ್ತಿದ್ದುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಜಿಲ್ಲಾಡಳಿತ ಭವನದ ಬಾಗಿಲನ್ನೇ ಬಂದ್ ಮಾಡಿ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರ ಪ್ರವೇಶ ನಿರ್ಬಂಧಿಸಲಾಗಿದೆ.
ಸಾಮಾಜಿಕ ಅಂತರದ ದೃಷ್ಟಿಯಿಂದ ಮಾಧ್ಯಮ ಪ್ರತಿನಿಧಿಗಳಿಗೂ ಸಭೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಜಿಲ್ಲಾಡಳಿತ ಭವನದ ಆವರಣದಲ್ಲಿ ಪಕ್ಷದ ಕಾರ್ಯಕರ್ತರು, ಜನರು ಸಚಿವರು ಕಾಣಲು ಕಾದು ಕುಳಿತಿದ್ದರು.
ಸಭೆಗೂ ಮುನ್ನ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ನೀಗಿಸುವ ಸಲುವಾಗಿ ಸರ್ಕಾರಿ ನೌಕರರು ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ರಾಮುಲು ಚಾಲನೆ ನೀಡಿದರು.