ETV Bharat / state

ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಚಿವ ಕೆ.ವೆಂಕಟೇಶ್ ಚಾಲನೆ; 4 ದಿನ ವಿವಿಧ ಕಾರ್ಯಕ್ರಮ - ದಸರಾ ಮ್ಯಾರಥಾನ್

ಇದು ಸಂಭ್ರಮದ ದಸರಾ ಅಲ್ಲ, ಸಾಂಪ್ರದಾಯಿಕ ದಸರಾ‌. ಮಳೆ ಅಭಾವ, ತಮಿಳುನಾಡಿನ ನೀರಿನ ಕ್ಯಾತೆಯಿಂದಾಗಿ ಸಂಭ್ರಮಪಡುವ ಸ್ಥಿತಿಯಲ್ಲಿ ನಾವಿಲ್ಲ- ಸಚಿವ ಕೆ.ವೆಂಕಟೇಶ್

Chamarajanagar Dussehra Festival
ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಚಿವ ಕೆ.ವೆಂಕಟೇಶ್ ಚಾಲನೆ
author img

By ETV Bharat Karnataka Team

Published : Oct 17, 2023, 6:13 PM IST

Updated : Oct 17, 2023, 10:14 PM IST

ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಚಿವ ಕೆ.ವೆಂಕಟೇಶ್ ಚಾಲನೆ

ಚಾಮರಾಜನಗರ: ಇಂದಿನಿಂದ ಚಾಮರಾಜನಗರದಲ್ಲಿ ದಸರಾ ಮಹೋತ್ಸವ ಆರಂಭವಾಗಿದೆ. ನಾಲ್ಕು ದಿನಗಳ ಮಹೋತ್ಸವ ನಡೆಯಲಿದೆ. ಜಿಲ್ಲಾ ಕೇಂದ್ರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಮರಾಜೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನಂದಿಕಂಬಕ್ಕೆ ಪೂಜೆ ಸಲ್ಲಿಸಿ ದಸರೆಗೆ ಚಾಲನೆ ನೀಡಿದರು. ದೇಗುಲದ ಆವರಣದಲ್ಲಿ ಪ್ರಧಾನ ವೇದಿಕೆ ನಿರ್ಮಾಣ ಮಾಡಲಾಗಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಚಿವರು ಡೋಲು ಬಾರಿಸುವುದರೊಂದಿಗೆ ಉದ್ಘಾಟಿಸಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಮರಿತಿಬ್ಬೇಗೌಡ ಉಪಸ್ಥಿತರಿದ್ದರು.

ಇದು ಸಾಂಪ್ರದಾಯಿಕ ದಸರಾ: ಸಚಿವ ಕೆ.ವೆಂಕಟೇಶ್ ಮಾತನಾಡಿ, "ಈ ಬಾರಿಯ ದಸರಾ ಸಂಭ್ರಮದ ದಸರಾವಲ್ಲ, ಸಾಂಪ್ರದಾಯಿಕ ದಸರಾ‌. ಮಳೆ ಅಭಾವ, ತಮಿಳುನಾಡಿನ ನೀರಿನ ಕ್ಯಾತೆಯಿಂದಾಗಿ ಸಂಭ್ರಮಪಡುವ ಸ್ಥಿತಿಯಲ್ಲಿ ನಾವಿಲ್ಲ ಎಂದರು. ಈಗಾಗಲೇ ಮಳೆ ಇಲ್ಲದೇ ಬೆಳೆಗಳು ಒಣಗಿವೆ. ಮಳೆ ಬರದಿದ್ದರೆ ಮುಂದೆ ಕುಡಿಯುವ ನೀರಿಗೂ ತೊಂದರೆ ಉಂಟಾಗಲಿದೆ. ಈಗ ಆಗುವ ಬೆಳೆನಷ್ಟ ಆಗಿ ಹೋಗಿದೆ. ಆದ್ದರಿಂದ ಕುಡಿಯಲು ಕುಡಿಯುವ ನೀರಿಗೆ ಯಾವ ತೊಂದರೆಯೂ ಆಗದಂತೆ ಕರುಣಿಸು ಎಂದು ದೇವರಲ್ಲಿಪ್ರಾರ್ಥಿಸಿದ್ದೇನೆ. ಜನರು ಕೂಡ ಉತ್ತಮ ಮಳೆಯಾಗಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಪ್ರಾರ್ಥಿಸಬೇಕು" ಎಂದು ಮನವಿ ಮಾಡಿದರು.

"ನಮ್ಮ ಡ್ಯಾಂಗಳಲ್ಲಿ ನೀರಿಲ್ಲ. ತಮಿಳುನಾಡು ನೀರು ಕೊಡಿ ಎಂದು ಕೇಳುತ್ತಿದೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀರು ಬಿಡಿ ಎನ್ನುತ್ತಿದೆ. ನಾವು ನೀರು ಬಿಡಲು ಸಾಧ್ಯವಿಲ್ಲ ಎಂದು ಮನವಿ ಮಾಡಿದರೂ ನಮ್ಮ ಮಾತನ್ನು ಅದು ಕೇಳಿಸಿಕೊಳ್ಳುತ್ತಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಾಮರಾಜನಗರ ದಸರಾ ಪ್ರಯುಕ್ತ ನಗರದಲ್ಲಿ ಚಿತ್ರಕಲಾ ಪ್ರದರ್ಶನ, ದಸರಾ ಕವಿಗೋಷ್ಠಿ, ಮಹಿಳಾ ಸಂಘಗಳ ಉತ್ಪನ್ನಗಳ ಮಾರಾಟ ಮೇಳಗಳಿಗೆ ಸಚಿವರು ಚಾಲನೆ ಕೊಟ್ಟರು.

ದಸರಾ ಮ್ಯಾರಥಾನ್, ನಾಟಕೋತ್ಸವ: ಅ.18ರಂದು ಬೆಳಿಗ್ಗೆ 6.30 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಾಲಯ ಅವರಣದಲ್ಲಿ ದಸರಾ ಮ್ಯಾರಥಾನ್ ಆಯೋಜಿಸಲಾಗಿದೆ. 10.30ಕ್ಕೆ ಮಹಿಳಾ ದಸರಾ ಕಾರ್ಯಕ್ರಮ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ನಡೆಯಲಿದೆ. 11ರಿಂದ 6 ಗಂಟೆಯವರೆಗೆ ವರನಟ ಡಾ.ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9.45ರವರೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಖ್ಯ ವೇದಿಕೆಯಲ್ಲಿ ಸಾಂಸ್ಕತಿಕ ಕಾರ್ಯಕ್ರಮಗಳು ನಡೆಯಲಿವೆ.

ವಿವಿಧ ಸಾಂಸ್ಕೃತಿಕ ಕಾಯಕ್ರಮಗಳು: ಅ.19ರಂದು ಬೆಳಗ್ಗೆ 10 ಗಂಟೆಗೆ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರೈತ ದಸರಾ ಏರ್ಪಡಿಸಲಾಗಿದೆ. 11ರಿಂದ 6 ಗಂಟೆಯವರೆಗೆ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9.45ರ ವರೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಸಮಾರಂಭಗಳು ಜರುಗಲಿವೆ.

ಸಮಾರೋಪ: ಅ. 20ರಂದು ಬೆಳಗ್ಗೆ 11ರಿಂದ 6 ಗಂಟೆಯವರೆಗೆ ಡಾ.ರಾಜ್‍ಕುಮಾರ್ ಜಿಲ್ಲಾ ರಂಗಮಂದಿರ ಹಾಗೂ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9.45ರ ವರೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಸಂಜೆ 7ಗಂಟೆಗೆ ದಸರಾ ಮಹೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂಓದಿ: ಕವಿಗೋಷ್ಠಿ ಉದ್ಘಾಟನಾ ಸಮಾರಂಭ: ಸಾಹಿತ್ಯಕ್ಕೆ ಸಮಾಜದ ಅಂಕು -ಡೊಂಕುಗಳನ್ನು ತಿದ್ದುವ ಶಕ್ತಿ ಇದೆ; ಸಚಿವ ಮಹದೇವಪ್ಪ

Last Updated : Oct 17, 2023, 10:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.