ETV Bharat / state

ಮಾನವೀಯತೆ ಮೆರೆದ ಸಚಿವ: ಬಿದ್ದಿದ್ದ ಮಹಿಳೆ ಸ್ವಂತ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ ರಾಮುಲು!

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಚಾಮರಾಜನಗರದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ಕುಸಿದು ಬಿದ್ದಿದ್ದ, ಮಹಿಳೆಯನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

ಆರೋಗ್ಯ ಸಚಿವ ಬಿ. ಶ್ರೀರಾಮುಲು
author img

By

Published : Sep 25, 2019, 9:23 PM IST

ಚಾಮರಾಜನಗರ: ರಸ್ತೆಬದಿ ಕುಸಿದು ಬಿದ್ದಿದ್ದ ಮಹಿಳೆಯನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಮಾನವೀಯತೆ ಮೆರೆದಿದ್ದಾರೆ. ಚಾಮರಾಜನಗರದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ರಸ್ತೆಬದಿ ಕುಸಿದು ಬಿದ್ದ ಮಹಿಳೆಯನ್ನು ತಮ್ಮ ವಾಹನದಲ್ಲೇ ಮಲೆಮಹದೇಶ್ವರ ಬೆಟ್ಟ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಮಾದಪ್ಪನ ದರ್ಶನ ಪಡೆದ ಬಳಿಕ ಆಸ್ಪತ್ರೆಗೆ ಬಂದು ಮಹಿಳೆಯ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ ಮತ್ತು ಔಷಧ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ಮಾನವೀಯತೆ ಮೆರೆದ ಆರೋಗ್ಯ ಸಚಿವರು

ತಮ್ಮ ಹೆಸರಲ್ಲಿ ಅರ್ಚನೆ: ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀರಾಮುಲು ತಮ್ಮ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿಕ, ದಾಸೋಹಭವದಲ್ಲಿ ಪ್ರಸಾದ ಸೇವಿಸಿದರು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಮಾತ್ರ ಉಳಿಯಲಿದೆ: ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಅವರು ಶ್ರೀರಾಮುಲು ಮಾತನಾಡಿ, ರಾಜ್ಯದ ಮುಂದಿನ ದಿನಗಳಲ್ಲಿ ಬಿಜೆಪಿ ಮಾತ್ರ ಉಳಿಯುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಂಪೂರ್ಣ ಸರ್ವನಾಶವಾಗುತ್ತದೆ ಎಂದರು. ರಾಜ್ಯದಲ್ಲಿ ಜನಪರ ಸರ್ಕಾರ ಎಂದರೆ ಅದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಮಾತ್ರ . ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಜನರಿಗೆ ಮೋಸ ಮಾಡುವುದರಲ್ಲಿ ನಂ 1 ಸರ್ಕಾರ. ಹಿಂದಿನ ಸರ್ಕಾರ ಸುಳ್ಳು ಮಾಹಿತಿಗಳನ್ನು ನೀಡಿ ಜನರ ದಿಕ್ಕು ತಪ್ಪಿಸಿದೆ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದರು.

Intro:ಮಾನವೀಯತೆ ಮೆರೆದ ಆರೋಗ್ಯ ಸಚಿವ: ಬಿದ್ದಿದ್ದ ಮಹಿಳೆಗೆ ಸ್ವಂತ ವಾಹನದಲ್ಲಿ ಆಸ್ಪತ್ರೆಗೆ ದಾಖಲು!

ಚಾಮರಾಜನಗರ: ರಸ್ತೆಬದಿ ಕುಸಿದು ಬಿದ್ದಿದ್ದ ಮಹಿಳೆಯನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮಾನವೀಯತೆ ಮೆರೆದಿದ್ದಾರೆ.

Body:ಚಾಮರಾಜನಗರದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ರಸ್ತೆಬದಿ ಕುಸಿದು ಬಿದ್ದ ಮಹಿಳೆಯನ್ನು ತಮ್ಮ ವಾಹನದಲ್ಲೇ ಮಲೆಮಹದೇಶ್ವರ ಬೆಟ್ಟ
ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಮಾದಪ್ಪನ ದರ್ಶನ ಪಡೆದ ಬಳಿಕ ಆಸ್ಪತ್ರೆಗೆ ಬಂದು ಮಹಿಳೆಯ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ ಮತ್ತು ಔಷಧ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ತಮ್ಮ ಹೆಸರಲ್ಲಿ ಅರ್ಚನೆ: ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀರಾಮುಲು ತಮ್ಮ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿಕ, ದಾಸೋಹಭವದಲ್ಲಿ ಪ್ರಸಾದ ಸೇವಿಸಿದರು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಮಾತ್ರ ಉಳಿಯಲಿದೆ:

ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಅವರು ಶ್ರೀರಾಮುಲು ಮಾತನಾಡಿ,
ರಾಜ್ಯದ ಮುಂದಿನ ದಿನಗಳಲ್ಲಿ ಬಿಜೆಪಿ ಮಾತ್ರ ಉಳಿಯುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಂಪೂರ್ಣ ಸರ್ವನಾಶವಾಗುತ್ತದೆ ಎಂದರು.

Conclusion:ರಾಜ್ಯದಲ್ಲಿ ಜನಪರ ಸರ್ಕಾರ ಎಂದರೆ ಅದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಮಾತ್ರ . ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಜನರಿಗೆ ಮೋಸ ಮಾಡುವುದರಲ್ಲಿ ನಂ 1 ಸರ್ಕಾರ. ಹಿಂದಿನ ಸರ್ಕಾರ ಜನರಿಗೆ ಸುಳ್ಳು ಮಾಹಿತಿಗಳನ್ನು ನೀಡಿ ಜನರಿಗೆ ದಿಕ್ಕು ತಪ್ಪಿಸಿದೆ. ನಮ್ಮ ಸರ್ಕಾರ ಸುಭದ್ರವಾಗಿ ಇದೆ ಯಾರು ಸಹ ಅದನ್ನು ಮುಟ್ಟುವುದಕ್ಕೂ ಸಹ ಸಾಧ್ಯವಿಲ್ಲ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸುಳ್ಳು ಮಾತುಗಳನ್ನು ಹೇಳುವುದರಲ್ಲಿ ಎತ್ತಿದ ಕೈ ಎಂದು ಲೇವಡಿ ಮಾಡಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.