ETV Bharat / state

ಕೊರೊನಾದಿಂದ ಗುಣಮುಖರಾಗುವ ಸಂಖ್ಯೆಯೂ ಹೆಚ್ಚಿದೆ: ಸಚಿವ ಸುರೇಶ್​ ಕುಮಾರ್​

ರಾಜ್ಯದಲ್ಲಿ ಕೊರೊನಾ ಸೋಂಕಿತರ ಪೈಕಿ ಐಸಿಯುನಲ್ಲಿರುವವರು ಕೇವಲ 16 ಮಂದಿ ಮಾತ್ರ. 900 ವೆಂಟಿಲೇಟರ್​ಗಳ ವ್ಯವಸ್ಥೆ ಮಾಡಲಾಗಿದೆ, ಆದರೆ, ಒಬ್ಬನೇ ಒಬ್ಬ ವೆಂಟಿಲೇಶನ್​​ನಲ್ಲಿಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಶೇ. 1ರಷ್ಟು ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ತಿಳಿಸಿದರು.

Minister Suresh Kumar Press Meet at Kollegal
ಶಿಕ್ಷಣ ಸಚಿವ ಸುರೇಶ್ ಕುಮಾರ್
author img

By

Published : Jun 5, 2020, 5:00 PM IST

Updated : Jun 5, 2020, 5:11 PM IST

ಚಾಮರಾಜನಗರ: ಕೊರೊನಾ ಸೋಂಕಿತರ ಸಂಖ್ಯೆಯ ಹೆಚ್ಚಳವನ್ನು ಮಾತ್ರ ನಾವು ನೋಡುತ್ತಿದ್ದೇವೆ. ಆದರೆ, ರಾಜ್ಯದಲ್ಲಿ ಗುಣಮುಖರಾಗುತ್ತಿರುವ ಸಂಖ್ಯೆಯೂ ಹೆಚ್ಚಿನ ಸಂಖ್ಯೆಯಲ್ಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಕೊಳ್ಳೇಗಾಲದಲ್ಲಿ ಮಾತನಾಡಿ, ಇಡೀ ರಾಜ್ಯದಲ್ಲಿ ಕೊರೊನಾ ಸೋಂಕಿತರ ಪೈಕಿ ಐಸಿಯುನಲ್ಲಿರುವವರು ಕೇವಲ 16 ಮಂದಿ ಮಾತ್ರ. ರಾಜ್ಯದಲ್ಲಿ 900 ವೆಂಟಿಲೇಟರ್ ವ್ಯವಸ್ಥೆ ಇದೆ, ಆದರೆ, ಒಬ್ಬನೇ ಒಬ್ಬ ವೆಂಟಿಲೇಶನ್​​ನಲ್ಲಿಲ್ಲ. ಕೊರೊನಾ ಸೋಂಕಿನಿಂದ ಶೇ. 1ರಷ್ಟು ಜನರು ಮಾತ್ರ ಸಾವಿಗೀಡಾಗುತ್ತಿದ್ದಾರೆ. ಕೋವಿಡ್-19 ಉದ್ದೇಶಕ್ಕಾಗಿ ವ್ಯವಸ್ಥೆ ಮಾಡಲಾಗಿರುವ ಹಾಸಿಗೆಗಳಲ್ಲಿ ಶೇ. 7 ರಷ್ಟು ಮಂದಿ ಮಾತ್ರ ಇದ್ದಾರೆ ಎಂದು ತಿಳಿಸಿದರು.

ಶಿಕ್ಷಣ ಸಚಿವ ಸುರೇಶ್ ಕುಮಾರ್

ಮುಂಬೈ‌ನಿಂದ ರಾಜ್ಯಕ್ಕೆ ಬರುತ್ತಿರುವವರ ಸಂಖ್ಯೆ ಹೆಚ್ಚಿರುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ವೈಯಕ್ತಿಕ ಶಿಸ್ತನ್ನು ನಾವು ಬೆಳೆಸಿಕೊಳ್ಳಬೇಕು ಈ ಮೂಲಕ ಕೊರೊನಾ ವಿರುದ್ಧ ನಾವು ಹೋರಾಡಬೇಕು ಎಂದು ಸಚಿವರು ಕಿವಿಮಾತು ಹೇಳಿದರು.

ಇದಕ್ಕೂ ಮುನ್ನ, ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಯೊಂದಿಗೆ ಅವರು ಸಭೆ ನಡೆಸಿದರು.

Last Updated : Jun 5, 2020, 5:11 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.