ಚಾಮರಾಜನಗರ : SSLC ಪರೀಕ್ಷೆ ಫಲಿತಾಂಶ ಆಗಸ್ಟ್ 10ರ ಮಧ್ಯಾಹ್ನ 3 ಗಂಟೆಗೆೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪುಗೂಡಬಾರದೆಂಬ ಎಚ್ಚರಿಕೆಯಿಂದ ಈ ಬಾರಿ ವಿದ್ಯಾರ್ಥಿಗಳ ಮೊಬೈಲ್ಗೆ ಫಲಿತಾಂಶ ಬರುವ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಇದರ ಜೊತೆಗೆ ವೆಬ್ಸೈಟ್ನಲ್ಲೂ ಸಹ ಫಲಿತಾಂಶ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಉತ್ತಮ ರೀತಿ ಪರೀಕ್ಷೆ ಬರೆದಿದ್ದಾರೆ. ಒಳ್ಳೆಯ ಫಲಿತಾಂಶವೂ ಬರಬೇಕೆಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ. ಫಲಿತಾಂಶದಿಂದ ಯಾರೂ ನಿರಾಶರಾಗುವುದು ಬೇಡ, ಜೀವನದಲ್ಲಿ ಇದೇ ಕೊನೆಯಲ್ಲ. ಇದೂ ಒಂದು ಭಾಗ ಅಷ್ಟೇ ಎಂದರು.
ಸೆಪ್ಟೆಂಬರ್ನಲ್ಲಿ ಪೂರಕ ಪರೀಕ್ಷೆ ನಡೆಸಲಾಗುವುದು. ಜೂನ್ ಹಾಗೂ ಜುಲೈನಲ್ಲಿ ನಡೆದ ಪರೀಕ್ಷೆಯಲ್ಲಿ ಕೊರೊನಾ ಕಾರಣದಿಂದಾಗಿ ಸುಮಾರು 16 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಇವರೆಲ್ಲರನ್ನೂ ಪೂರಕ ಪರೀಕ್ಷೆಯಲ್ಲಿ ಹೊಸ ವಿದ್ಯಾರ್ಥಿಗಳು ಅಂತಲೇ ಪರಿಗಣಿಸಲಾಗುತ್ತದೆ ಎಂದರು.