ಚಾಮರಾಜನಗರ: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣವನ್ನು ಸಿಎಂ ಬೊಮ್ಮಾಯಿ ಗಂಭೀರವಾಗಿ ವಿಮರ್ಶಿಸುತ್ತಿದ್ದಾರೆ. ಈಶ್ವರಪ್ಪ ರಾಜೀನಾಮೆ ಪಡೆಯುವ ಬಗ್ಗೆ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಗುತ್ತಿಗೆದಾರರ ಸಂಘದ ಕೆಂಪಣ್ಣ ನನಗೆ ಗೊತ್ತಿರುವ ವ್ಯಕ್ತಿ, ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಅವರ ದೂರಿಗೆ ಸಿಎಂ ಈಗಾಗಲೇ ತನಿಖೆಗೆ ಸೂಚಿಸಿದ್ದಾರೆ. ನಾನಂತೂ ಗುತ್ತಿಗೆದಾರರಿಗೆ ನೋವು ಕೊಡುವ ವ್ಯಕ್ತಿಯಲ್ಲ. ಬೊಮ್ಮಾಯಿ ಅಧಿಕಾರಕ್ಕೆ ಬಂದು ಒಂದು ವರ್ಷವಾಗುತ್ತಿದ್ದು, ನಾವು ಯಾವ ರೀತಿ ಬದಲಾವಣೆ ಮಾಡುತ್ತಿದ್ದೇವೆಂದು ಜನ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ