ಚಾಮರಾಜನಗರ: ರಾಜ್ಯ ಸರ್ಕಾರ ಆಚರಿಸುತ್ತಿರುವ ವೈಭವದ ದಸರಾಗೆ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದು, ಅದ್ಧೂರಿ ಆಚರಣೆ ವಿರುದ್ಧ ಕಿಡಿಕಾರಿದ್ದಾರೆ.
ಕೊಳ್ಳೇಗಾಲದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕಂಡು ಕೇಳರಿಯದ ಪ್ರವಾಹಕ್ಕೆ ರಾಜ್ಯ ತುತ್ತಾಗಿರಬೇಕಾದರೆ ಆಡಂಬರದ ದಸರಾ ಬೇಡವಾಗಿತ್ತು. ತಿಂದು ತೇಗಿ, ಕುಣಿದು-ಕುಪ್ಪಳಿಸುವುದು ಸಂಪ್ರದಾಯವಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರಳವಾಗಿ ದಸರಾ ಆಚರಿಸುವಂತೆ ಹೇಳಿದ್ದೆ, ಆದರೆ ಉಸ್ತುವಾರಿ ಸಚಿವ ಸೋಮಣ್ಣ ಕೇಳಲಿಲ್ಲ. ದಸರಾದ ಯಾವುದೇ ಕಾರ್ಯಕ್ರಮಗಳಿಗೆ ನಾನು ಭಾಗಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರದ ವಿರುದ್ಧ ಸ್ವಪಕ್ಷಿಯರೇ ಕೆಂಡ ಉಗುಳಿರುವುದು ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಂತಿದೆ.