ETV Bharat / state

ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳಿಗೆ ಶಾಸಕ ಎನ್​.ಮಹೇಶ್​​ ಭೇಟಿ: ಎಚ್ಚರಿಕೆಯಿಂದ ಪರೀಕ್ಷೆ ನಡೆಸಲು ಸೂಚನೆ

ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳನ್ನು ಖುದ್ದು ವಿಕ್ಷೀಸಿದ ಶಾಸಕ ಎನ್.ಮಹೇಶ್, ಜೂನ್ 25ರಿಂದ ಪರೀಕ್ಷೆ ಬರೆಯಲು ಬರುವ ಮಕ್ಕಳ ಆರೋಗ್ಯ ದೃಷ್ಟಿಯಿಂದ ಎಚ್ಚರ ವಹಿಸಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

author img

By

Published : Jun 11, 2020, 5:34 PM IST

Updated : Jun 11, 2020, 6:31 PM IST

MLA N. Mahesh
ಶಾಸಕ ಎನ್‌. ಮಹೇಶ್

ಕೊಳ್ಳೇಗಾಲ: ತಾಲೂಕಿನ ಐದು ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಮಾಜಿ ಶಿಕ್ಷಣ ಸಚಿವ ಹಾಗೂ ಶಾಸಕ ಎನ್.ಮಹೇಶ್, ಅಧಿಕಾರಿಗಳಿಗೆ ಪರೀಕ್ಷೆ ನಡೆಸುವ ಬಗ್ಗೆ ನಿರ್ದೇಶನ ನೀಡಿದರು.

MLA N. Mahesh
ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಜಿಲ್ಲೆಯಲ್ಲಿ ಒಟ್ಟು 11,300 ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಪೈಕಿ ಕೊಳ್ಳೇಗಾಲ ವಿಧಾನಕ್ಷೇತ್ರದಲ್ಲಿ 3,3556 ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಕೋವಿಡ್-19 ಭೀತಿ ಇರುವುದರಿಂದ ಬಹಳ ಸೂಕ್ಷ್ಮವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದ್ದೇನೆ.

ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳಿಗೆ ಶಾಸಕ ಎನ್​.ಮಹೇಶ್​​ ಭೇಟಿ: ಎಚ್ಚರಿಕೆಯಿಂದ ಪರೀಕ್ಷೆ ನಡೆಸಲು ಸೂಚನೆ

ಕೋವಿಡ್ ನಡುವೆಯೂ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಶಿಕ್ಷಣ ಸಚಿವರು, ಪರೀಕ್ಷೆ ಯಶಸ್ವಿಯಾಗಿ ನಡೆಸಲು ರಾಜ್ಯದ ಎಲ್ಲಾ ಶಾಸಕರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಈ ಹಿನ್ನೆಲೆ ಸಂಬಂಧಪಟ್ಟ ಇಲಾಖೆಗೆ ನಾನು ಪತ್ರ ಬರೆದಿದ್ದೇನೆ. ಮಕ್ಕಳ ಭವಿಷ್ಯದಲ್ಲಿ ಈ ಪರೀಕ್ಷೆ ಮುಖ್ಯವಾಗಿದೆ. ಇದರ ಜೊತೆಗೆ ಸುರಕ್ಷತೆ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ ಶುಚಿತ್ವ ಹಾಗೂ ಸಾನಿಟೈಸ್ ಮಾಡಬೇಕು. ಕೊಠಡಿಗಳಲ್ಲಿ ಸ್ವಲ್ಪವೂ ಕಸ, ಧೂಳು ಇರದಂತೆ ನೋಡಿಕೊಳ್ಳಬೇಕು. ಒಂದು ಕೊಠಡಿಯಲ್ಲಿ 18-20 ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೆಮ್ಮು, ಜ್ವರ ಲಕ್ಷಣಳಿದ್ದರೆ ಅಂತಹ ಮಕ್ಕಳನ್ನು ಪ್ರತ್ಯೇಕ ರೂಂನಲ್ಲಿ ಪರೀಕ್ಷೆ‌ ಬರೆಸಬೇಕು‌ ಎಂದು ತಿಳಿಸಿದ್ದೇನೆ.

ವಿವಿಧ ಗ್ರಾಮಗಳಿಂದ ಬರುವ ಮಕ್ಕಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಕೆಎಸ್​ಆರ್​ಟಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ನಗರಸಭೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆಗಳು ಪರೀಕ್ಷಾ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದರು.

Last Updated : Jun 11, 2020, 6:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.