ಚಾಮರಾಜನಗರ: ಒಂದಿಬ್ಬರು ಶಾಸಕರು ಮಾತನಾಡಿರುವುದಕ್ಕೆ ಬೆಲೆ ಇಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಗುಂಡ್ಲುಪೇಟೆ ಶಾಸಕ ನಿರಂಜನಕುಮಾರ್ ಹೇಳಿದರು.
ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಬಿಜೆಪಿಯ ಪ್ರಶ್ನಾತೀತ ನಾಯಕ. ಅವರು ಬದಲಾವಣೆ ಪ್ರಶ್ನೆಯೇ ಇಲ್ಲ. ಬದಲಾಗುವುದು ಇಲ್ಲ. ಸಿಎಂ ಬದಲಾವಣೆ ಕೇವಲ ಮಾಧ್ಯಮಗಳಲ್ಲಷ್ಟೇ ಚರ್ಚೆಯಾಗುತ್ತಿದ್ದು ಪಕ್ಷದ ಚೌಕಟ್ಟಿನಲ್ಲಿ ಆ ಪ್ರಸಂಗ ಬಂದಿಲ್ಲ ಎಂದು ತಿಳಿಸಿದರು.
ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಹೈಕಮಾಂಡ್ ಆಗಲಿ, ರಾಜ್ಯಾಧ್ಯಕ್ಷರಾಗಲಿ ಮಾತನಾಡಿಲ್ಲ. ಸಿಎಂ ಬದಲಾಗುತ್ತಾರೆ ಎಂಬುದು ಕೇವಲ ಊಹಾಪೋಹವಷ್ಟೇ, ಇನ್ನು ಕಟೀಲ್ ಅವರ ವೈರಲ್ ಆಡಿಯೋ ಕೂಡ ನಕಲಿ ಎಂದು ಅವರೇ ಹೇಳಿದ್ದಾರೆ ಎಂದು ತಿಳಿಸಿದರು.