ETV Bharat / state

ಪರ್ಸೇಂಟೇಜ್ ಇಲ್ಲದ ಯೋಜನೆ ಜಾರಿ, ಇಡೀ ಪ್ರಪಂಚದಲ್ಲೇ ಮಾದರಿ ಸರ್ಕಾರ ನಮ್ಮದು: ಕೃಷ್ಣ ಬೈರೇಗೌಡ

author img

By ETV Bharat Karnataka Team

Published : Oct 21, 2023, 3:29 PM IST

Updated : Oct 21, 2023, 5:51 PM IST

ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಲೋಕಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು.

Revenue Minister Krishna Byre Gowda spoke at the event.
ಚಾಮರಾಜನಗರದಲ್ಲಿ ಸಚಿವ ಕೃಷ್ಣ ಬೈರೇಗೌಡ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಾಮರಾಜನಗರ: ನಮ್ಮ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಮಾದರಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರ್ಕಾರಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನು ನಾವು ನೀಡಿದ್ದೇವೆ. ಎಲ್ಲವೂ ಕೂಡ ಸಾಮಾನ್ಯ ಜನರಿಗೆ, ನೈಜ ಫಲಾನುಭವಿಗಳಿಗೆ ತಲುಪುವ ಯೋಜನೆಗಳು, ನಾವು ಅಂಬಾನಿ - ಅದಾನಿಗೆ ಕೊಡುತ್ತಿಲ್ಲ, ತಿಮ್ಮಣ್ಣ-ಬೊಮ್ಮಣ್ಣಗೆ ಕೊಡುತ್ತಿದ್ದೇವೆ ಎಂದು ಹೇಳಿದರು.

ನಮ್ಮದು ಪರ್ಸೇಂಟೇಜ್ ಇಲ್ಲದ ಯೋಜನೆಗಳು, ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ, ಒಂದು ಕುಟುಂಬಕ್ಕೆ ಏನಿಲ್ಲವೆಂದರೂ ತಿಂಗಳಿಗೆ 4-5 ಸಾವಿರ ಹಣ ಜಮೆಯಾಗುತ್ತಿದೆ, ನೊಬೆಲ್ ಪ್ರಶಸ್ತಿ ಪುರಸ್ಕೃತರು ನಮ್ಮ ಸರ್ಕಾರದ ಯೋಜನೆಗಳನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ ಎಂದರು.

ಇಂಡಿಯಾ ಒಕ್ಕೂಟಕ್ಕೆ ಒಲವು: ಕರ್ನಾಟಕದಲ್ಲಿ ಕಾಂಗ್ರೆಸ್​​​ನ ಅಭೂತಪೂರ್ವ ಯಶಸ್ಸು ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ಎಲ್ಲ ಸಾಧ್ಯತೆ ಎದ್ದು ಕಾಣುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪರ ಜನರ ನಿಲುವು ವ್ಯಕ್ತವಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಮ್ಮ ಯೋಜನೆಗಳು ಜನರ ಬಳಿ ಹೋಗಿವೆ. ಆದರೆ, ಕೊಟ್ಟದ್ದು ಕಾಂಗ್ರೆಸ್ ಎಂಬುದು ಜನರಿಗೆ ತಿಳಿಯಬೇಕು. ಲೋಕಸಭಾ ಚುನಾವಣೆಯಲ್ಲಿ ನಾವು ಉತ್ತಮ ಫಲಿತಾಂಶ ಪಡೆಯಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು. ಶಾಸಕರಾದ ಸಿ‌.ಪುಟ್ಟರಂಗಶೆಟ್ಟಿ, ಎ.ಆರ್‌.ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.

ಮತ್ತೆ 21 ತಾಲೂಕು ಬರಪೀಡಿತ ಘೋಷಣೆ: ಕೇಂದ್ರ ಸಚಿವರನ್ನು ಭೇಟಿ ಮಾಡಲು ನಾನು ಹಾಗೂ ಸಚಿವ ಕೃಷ್ಣ ಭೈರೇಗೌಡರು ಸಮಯ ಕೇಳಿದ್ದೇವೆ. ಆದರೆ ಕೇಂದ್ರ ಸಚಿವರು ಸಮಯ ನೀಡುತ್ತಿಲ್ಲ. ಮುಂದಿನ ದಿನಗಳಲ್ಲಿಯೂ ಭೇಟಿಗೆ ಸಮಯ ನಿಗದಿ ಮಾಡಿಲ್ಲ. ಆದರೆ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ದೂರಿದರು.

ಮೈಸೂರಿನಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಬರಗಾಲ ಇದ್ದು ರೈತರು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಸರ್ಕಾರ ಏನೆಲ್ಲ ಮಾಡಬೇಕೋ ಅದನ್ನೆಲ್ಲಾ ಮಾಡುತ್ತದೆ. ನಿನ್ನೆಯಷ್ಟೇ ಮತ್ತೆ 21 ತಾಲೂಕುಗಳನ್ನು ಸರ್ಕಾರ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಲು ಕೇಂದ್ರದ ಕೃಷಿ ಸಚಿವರನ್ನು ಭೇಟಿಗಾಗಿ ನಾನು ಮತ್ತು ಸಚಿವ ಕೃಷ್ಣ ಬೈರೇಗೌಡರು ಪ್ರಯತ್ನ ಮಾಡುತ್ತೇವೆ. ಅವರ ರಿಪ್ಲೈ ನೋಡಿ ಮುಂದೆ ನಾವೇನು ಮಾಡಬೇಕು ಎಂಬುದನ್ನು ತೀರ್ಮಾನಿಸುತ್ತೇವೆ ಎಂದರು.

ಇದನ್ನೂಓದಿ: ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್‌ ಖರೀದಿ: ಮುಖ್ಯಮಂತ್ರಿ ಸೂಚನೆ

Last Updated : Oct 21, 2023, 5:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.