ETV Bharat / state

ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಅರಣ್ಯ ಇಲಾಖೆಯಿಂದ ಸಕಲ ತಯಾರಿ - ಕೇರಳದ ವಯನಾಡು ಅರಣ್ಯ ಪ್ರದೇಶ

ಪ್ರಧಾನಿ ನರೇಂದ್ರ ಮೋದಿ ಬಂಡೀಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು ಅರಣ್ಯ ಇಲಾಖೆ ಹೆಲಿಪ್ಯಾಡ್​ ವ್ಯವಸ್ಥೆ ಹಾಗೂ ಇತರ ತಯಾರಿ ಮಾಡುತ್ತಿದೆ.

Modi likely to visit Bandipur
ಬಂಡೀಪುರಕ್ಕೆ ಮೋದಿ ಭೇಟಿ ಸಾಧ್ಯತೆ
author img

By

Published : Mar 31, 2023, 12:24 PM IST

Updated : Mar 31, 2023, 1:25 PM IST

ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಅರಣ್ಯ ಇಲಾಖೆಯಿಂದ ಸಕಲ ತಯಾರಿ

ಚಾಮರಾಜನಗರ: ಏಪ್ರಿಲ್ 9 ರಂದು ಮೈಸೂರಿನಲ್ಲಿ ಪ್ರಾಜೆಕ್ಟ್ ಟೈಗರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ನೆರವೇರಿಸಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡುವ ಸಾಧ್ಯತೆ ದಟ್ಟವಾಗಿದೆ. 1973 ರಲ್ಲಿ ಪ್ರಾಜೆಕ್ಟ್ ಟೈಗರ್ ಘೋಷಿಸಿದ್ದು, ಯೋಜನೆಯಲ್ಲಿ ಬಂಡೀಪುರವೂ ಸೇರಿದೆ. ಇದರ ಜೊತೆಗೆ, ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿಗಳಿರುವ ಸಂರಕ್ಷಿತ ಪ್ರದೇಶವೂ ಇದಾಗಿದೆ. ಅಷ್ಟೇ ಅಲ್ಲದೇ, ಕೆಲವು ದಿನಗಳ ಹಿಂದೆಯಷ್ಟೇ ಆನೆಯನ್ನು ಬದುಕಿಸಿದ್ದ ಅರಣ್ಯಾಧಿಕಾರಿಗಳ ಕ್ರಮವನ್ನು ಮೋದಿ ಶ್ಲಾಘಿಸಿದ್ದರು.

ಮೈಸೂರಿನಿಂದ ಕಾರ್ಯಕ್ರಮ ಮುಗಿಸಿ ನೇರವಾಗಿ ಬಂಡೀಪುರಕ್ಕೆ ನರೇಂದ್ರ ಮೋದಿ ಬಂದಿಳಿಯಲಿದ್ದು, ಸಫಾರಿ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಾಕಷ್ಟು ತಯಾರಿ ನಡೆಸುತ್ತಿದ್ದು, ಬಂಡೀಪುರಕ್ಕೆ ಹೋಗುವ ರಸ್ತೆ ಮಧ್ಯೆ ಸಿಗುವ ಸಫಾರಿ ಕೇಂದ್ರದ ಬಳಿ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗುತ್ತಿದೆ. ರಸ್ತೆ ದುರಸ್ತಿಯೂ ನಡೆಯುತ್ತಿದೆ.

ಇದನ್ನೂ ಓದಿ: ವಿದ್ಯುತ್ ಶಾಕ್​​ನಿಂದ ಆನೆ ಬಚಾವ್ - ಟ್ವೀಟ್ ಮಾಡಿ ಪ್ರಧಾನಿ ಮೋದಿ ಸಂತಸ..ನೆಟಿಜೆನ್ಸ್​​ ಫಿದಾ

ಬಂಡೀಪುರ ಸಿಎಫ್ಒ ರಮೇಶ್ ಕುಮಾರ್ ಪ್ರತಿಕ್ರಿಯಿಸಿ, "ಮೋದಿ ಅವರು ಬಂಡೀಪುರಕ್ಕೆ ಭೇಟಿ ಕೊಡುವ ಸಾಧ್ಯತೆ ಇರುವುದರಿಂದ ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಆನೆ ಉಳಿಸಿದ ಸಿಬ್ಬಂದಿಗೆ ಸ್ಮರಣಿಕೆ ಕೊಡುವುದರ ಜೊತೆಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಯೋಜಿಸಲಾಗುತ್ತಿದೆ" ಎಂದು ತಿಳಿಸಿದ್ದಾರೆ‌.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ತಮಿಳುನಾಡಿನ ಮಧುಮಲೈ ಹಾಗೂ ಕೇರಳದ ವಯನಾಡು ಅರಣ್ಯ ಪ್ರದೇಶದ ಗಡಿ ಹೊಂದಿದ್ದು, 1973ರಲ್ಲಿ ಹುಲಿ ಯೋಜನೆ ಘೋಷಿಸಿದ ವೇಳೆ ಕೇವಲ 10-15 ಹುಲಿಗಳಿದ್ದವು. ಈಗ ಅವುಗಳ ಸಂಖ್ಯೆ 150 ದಾಟಿದೆ ಎಂಬ ಮಾಹಿತಿ ಇದೆ. ಇನ್ನು, ದೇಶದ ಪ್ರಧಾನಿಯೊಬ್ಬರು ಕರ್ನಾಟಕದ ಅರಣ್ಯ ಪ್ರದೇಶದಲ್ಲಿ ಸಫಾರಿ ನಡೆಸಿದರೆ, ಸ್ಮರಣೀಯ ಕ್ಷಣವಾಗಿ ದಾಖಲಾಗಲಿದೆ.

ಇದನ್ನೂ ಓದಿ: ಮೋದಿ ಮೆಚ್ಚುಗೆಗೆ ಬಂಡೀಪುರದಲ್ಲಿ ಸಂತಸ.. ಒದ್ದಾಡುತ್ತಿದ್ದ ಆನೆ ಉಳಿಸಿದ್ದೇ ಪವಾಡ

Last Updated : Mar 31, 2023, 1:25 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.