ಚಾಮರಾಜನಗರ: ಮಗ ಮತ್ತು ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಳಚವಾಡಿ ಗ್ರಾಮದಲ್ಲಿ ನಡೆದಿದೆ.

ಮಹದೇವಮ್ಮ (40), ಸಿದ್ದರಾಜು (23) ನೇಣಿಗೆ ಶರಣಾದ ದುರ್ದೈವಿಗಳು. ಕಿರಿಯ ಮಗ ನಂಜುಂಡಿ ಎಂಬಾತ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿದ್ದಕ್ಕೆ ಅವಮಾನ ತಾಳಲಾರದೆ ಬೇಸರಗೊಂಡು ತಾಯಿ-ಮಗ ಇಬ್ಬರೂ ರಾತ್ರಿ ನೇಣಿಗೆ ಶರಣಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲು ಸಿದ್ಧತೆ ನಡೆಸುತ್ತಿದ್ದಾರೆ.
ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.