ಚಾಮರಾಜನಗರ: 2019-20ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2ನೇ ಕಂತಿನ 50 ಲಕ್ಷ ರೂ. ಅನುದಾನವನ್ನು ಚಾಮರಾಜನಗರದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್ ಡಿಸಿಗೆ ಪತ್ರ ಬರೆದಿದ್ದಾರೆ.
8 ಮಂದಿ ಸಾವು:
ಜಿಲ್ಲೆಯಲ್ಲಿ ಕಳೆದ 14 ತಾಸುಗಳಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದು, ಇವರಲ್ಲಿ ನಾಲ್ವರು ಸೋಂಕಿತರಾಗಿದ್ದಾರೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.